-->
ಮಂಗಳೂರಿನ ಲಾಡ್ಜ್‌ನಲ್ಲಿ ನೀಟ್ ಪರೀಕ್ಷಾರ್ಥಿಯ ಸಹೋದರ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರಿನ ಲಾಡ್ಜ್‌ನಲ್ಲಿ ನೀಟ್ ಪರೀಕ್ಷಾರ್ಥಿಯ ಸಹೋದರ ನೇಣು ಬಿಗಿದು ಆತ್ಮಹತ್ಯೆ


ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಮಾಸುವ ಮುನ್ನವೇ, ಆಕೆಯ ಸಹೋದರ ಮಂಗಳೂರಿನ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಕೇರಳದ ಬೇಕಲ್‌ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತರು. ಅರ್ಜುನ್ ಅವರ ತಂಗಿ ಐಜಾ ಆರ್. ಮಹೇಶ್ ಕಳೆದ ಜೂನ್‌ನಲ್ಲಿ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಂಗಿಯ ಸಾವಿನ ಬಳಿಕ ಗಲ್ಫ್‌ಗೆ ತೆರಳಿದ್ದ ಅರ್ಜುನ್, ಭಾನುವಾರ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದರು. ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದ ಅವರನ್ನು ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಸೋಮವಾರ ಮರವೂರಿನ ಲಾಡ್ಜ್‌ವೊಂದರಲ್ಲಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬಜ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಯ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ. ಒಂದೇ ಕುಟುಂಬದ ಇಬ್ಬರು ಯುವ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Ads on article

Advertise in articles 1

advertising articles 2

Advertise under the article