-->
 ಅಂಬಲಪಾಡಿ: ಬಿಲ್ಲವ ಸೇವಾ ಸಂಘ ಮಹಿಳಾ ಘಟಕದಿಂದ ಆಟಿಡೊಂಜಿ ಕೂಟ

ಅಂಬಲಪಾಡಿ: ಬಿಲ್ಲವ ಸೇವಾ ಸಂಘ ಮಹಿಳಾ ಘಟಕದಿಂದ ಆಟಿಡೊಂಜಿ ಕೂಟ


ಅಂಬಲಪಾಡಿ ಬಿಲ್ಲವ ಸೇವಾ ಸಂಘ  ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ  ಆಟಿಡೊಂಜಿ ಕೂಟ ಕಾರ್ಯಕ್ರಮವು ಅಂಬಲಪಾಡಿ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.


ಸಂಘದ ಅಧ್ಯಕ್ಷ ಶಿವದಾಸ್ ಪಿ. ಅಧ್ಯಕ್ಷತೆ ವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಘದ ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಹಾಗೂ ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ ಮಾತನಾಡಿ, ತುಳುನಾಡಿನ ಆಚಾರ-ವಿಚಾರ, ಜೀವನ ಪದ್ಧತಿ, ಆಷಾಢ ಮಾಸದ ಮಹತ್ವ ಹಾಗೂ ಆಟಿ ತಿಂಗಳ ಸಾಂಪ್ರದಾಯಿಕ ಆಹಾರ ಪದ್ಧತಿಯ ಕುರಿತು ವಿವರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬ್ರಹ್ಮಾವರ ಶಾಖೆಯಿಂದ 'ತಾಲೂಕು ಅನುಪಮ ಸೇವಾ ಪುರಸ್ಕಾರ–2026' ಪ್ರಶಸ್ತಿಗೆ ಭಾಜನರಾದ ಚೇರ್ಕಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ವಿಜಯಲಕ್ಷ್ಮೀ ಕೃಷ್ಣ ಕೋಟ್ಯಾನ್ ಅಂಬಲಪಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಆಟಿ ತಿಂಗಳ ವೈವಿಧ್ಯಮಯ ಸಾಂಪ್ರದಾಯಿಕ ಖಾದ್ಯಗಳ ಪ್ರಾತ್ಯಕ್ಷಿಕೆ ನಡೆಯಿತು. ಮಹಿಳಾ ಘಟಕದ ಕಾರ್ಯದರ್ಶಿ ವಾಣಿಶ್ರೀ ಅರುಣ್ ವಿವಿಧ ಖಾದ್ಯಗಳನ್ನು ತಯಾರಿಸಿದ ಮಹಿಳೆಯರ ವಿವರವನ್ನು ವಾಚಿಸಿದರು. ಜತೆ ಕಾರ್ಯದರ್ಶಿ ಸಂಚಲ ಶಶಿಕಾಂತ್ ಸನ್ಮಾನಿತ ಶಿಕ್ಷಕಿಯ ಪರಿಚಯ ಮಾಡಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ. ಮುದ್ದಣ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್ ಸೇರಿದಂತೆ ಸಂಘ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು, ಸಮಿತಿ ಸದಸ್ಯರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

ಮಹಿಳಾ ಘಟಕದ ಸಂಚಾಲಕಿ ಗೋಧಾವರಿ ಎಂ. ಸುವರ್ಣ ಸ್ವಾಗತಿಸಿದರು. ಸಹ ಸಂಚಾಲಕಿ ವಿಜಯಲಕ್ಷ್ಮೀ ಕೃಷ್ಣ ಕೋಟ್ಯಾನ್ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ ಕಾರ್ಯಕ್ರಮ ನಿರೂಪಿಸಿದರು.

ಆಟಿ ತಿಂಗಳ ವಿವಿಧ ಸಾಂಪ್ರದಾಯಿಕ ಖಾದ್ಯಗಳೊಂದಿಗೆ ನಡೆದ ಸಾಮೂಹಿಕ ಭೋಜನದ ಮೂಲಕ ಕಾರ್ಯಕ್ರಮ ಸಮಾಪನಗೊಂಡಿತು

Ads on article

Advertise in articles 1

advertising articles 2

Advertise under the article