-->
 ರೆಂಜಾಳ ಹೇಡ್ಮೆ ಪ್ರದೇಶದಲ್ಲಿ ಭೂಕುಸಿತ: ಡಿಸಿ ಭೇಟಿ– ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

ರೆಂಜಾಳ ಹೇಡ್ಮೆ ಪ್ರದೇಶದಲ್ಲಿ ಭೂಕುಸಿತ: ಡಿಸಿ ಭೇಟಿ– ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ


ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸ್ವರೂಪ ಅವರು ಭೇಟಿ ನೀಡಿ ಪರಿಶೀಲಿಸಿದರು.


ಭೂಕುಸಿತದಿಂದ ಅಪಾಯಕ್ಕೆ ಒಳಗಾಗುವ ಸಾಧ್ಯತೆಯಿರುವ ಕುಟುಂಬಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ತಾತ್ಕಾಲಿಕವಾಗಿ ರೆಂಜಾಳ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುವಂತೆ ಸಂಬಂಧಿತ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.


ಪ್ರದೇಶದಲ್ಲಿ ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ, ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ (GSI) ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ತುರ್ತಾಗಿ ತಜ್ಞರ ತಂಡವನ್ನು ಅಧ್ಯಯನಕ್ಕಾಗಿ ಕಳುಹಿಸುವಂತೆ ಮನವಿ ಮಾಡಲಾಯಿತು. ಈ ತಂಡವು ಗುರುವಾರ ಬೆಂಗಳೂರಿನಿಂದ ಆಗಮಿಸಿ ಸ್ಥಳ ಪರಿಶೀಲನೆ ನಡೆಸುವ ನಿರೀಕ್ಷೆಯಿದೆ.


ಈ ವೇಳೆ ಸ್ಥಳೀಯ ಅಧಿಕಾರಿಗಳಿಗೆ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 

Ads on article

Advertise in articles 1

advertising articles 2

Advertise under the article