ಅಲೆವೂರಿನ ಶಾಂತಿನಿಕೇತನ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
Saturday, August 15, 2026
“ಭಾರತ ಭಾಗ್ಯವಿಧಾತ” ಎನ್ನುವ ರೀತಿಯಲ್ಲಿ ಯುವಜನರು ದೇಶದ ಹೆಮ್ಮೆಯ ಪ್ರಜೆಗಳಾಗಿ ಬೆಳೆಯಬೇಕು ಎಂದು ನ್ಯಾಯವಾದಿ ಪಿ. ಲಕ್ಷ್ಮಣ್ ಆರ್. ಶೆಣೈ ಕರೆ ನೀಡಿದರು.
ಅವರು ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸ್ವಾತಂತ್ರ್ಯದ ಇತಿಹಾಸ ಹಾಗೂ ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ಯುವಜನರು ಅರಿತುಕೊಳ್ಳುವುದು ಅತ್ಯಗತ್ಯ ಎಂದರು. ಯುಪಿಎಸ್ಸಿ, ಐಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಪ್ರಶ್ನೆಗಳು ಕೇಳಲಾಗುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ದೇಶದ ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಾಲಾ ಸಂಚಾಲಕ ಅಲೆವೂರು ದಿನೇಶ್ ಕಿಣಿ ಹಾಗೂ ಪ್ರಾಂಶುಪಾಲೆ ರೂಪಾ ಡಿ. ಕಿಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಶರತ್ ಎಚ್.ಎಸ್., ಸಹಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಹಶಿಕ್ಷಕಿ ವಿಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ನೃತ್ಯ, ಭಾಷಣ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಗಮನ ಸೆಳೆದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.
.jpeg)
.jpeg)
.jpeg)
.jpeg)