-->
ಉಡುಪಿ ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ

ಉಡುಪಿ ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ


ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮದ ಅಂಗವಾಗಿ ಶಿರೂರು ಲಕ್ಷ್ಮೀವರ ತೀರ್ಥ ಶ್ರೀಪಾದರ ಸವಿ ನೆನಪಿಗಾಗಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಸಾರ್ವಜನಿಕರಿಗೆ ಉಚಿತ ಚಕ್ಕುಲಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಚೇರಿ ಮುಂಭಾಗದಲ್ಲಿ ಗಣ್ಯರ ಸಮ್ಮುಖದಲ್ಲಿ ಚಕ್ಕುಲಿ ವಿತರಣೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀವರ ತೀರ್ಥ ಶ್ರೀಪಾದರ ಸಹೋದರ ಲಾತವ್ಯ ಆಚಾರ್ಯ, ನಾಗರಿಕ ಸಮಿತಿಯು ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಚಕ್ಕುಲಿ ವಿತರಿಸುವ ಮೂಲಕ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಮತ್ತಷ್ಟು ಸ್ಮರಣೀಯವಾಗಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಸಹಕಾರಿ ಧುರೀಣ ಹಾಗೂ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಮಾಜಮುಖಿ ಸೇವೆಗಳು ಜನಮಾನಸದಲ್ಲಿ ಶಾಶ್ವತವಾಗಿ ಉಳಿಯಲಿವೆ. ಅವರ ಪ್ರತಿಯೊಂದು ಕಾರ್ಯವೂ ವಿಭಿನ್ನ ಹಾಗೂ ಮಾದರಿಯುತವಾಗಿದ್ದು, ಇಂತಹ ಸಮಾಜ ಸೇವಾ ಕಾರ್ಯಗಳು ಮುಂದೆಯೂ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ನಾಗರಿಕ ಸಮಿತಿಯ ಅಧ್ಯಕ್ಷ ನಾಗೇಶ್ ಹೆಗ್ಡೆ ಮಾತನಾಡಿದರು. ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಉದ್ಯಮಿ ಭಾಸ್ಕರ್ ಶೇರಿಗಾರ್, ಗೀತಾ ನಾಗೇಶ್ ಹೆಗ್ಡೆ, ರಾಘವೇಂದ್ರ ಪ್ರಭು ಕರ್ವಾಲು, ವಿಕಾಸ್ ಶೆಟ್ಟಿ, ಗಂಗಾಧರ್, ವಾಸುದೇವ, ಶಂಕರ್ ನಾಯಕ್, ಸುಮಾ ಆಚಾರ್ಯ, ದೇವಕಿ ಬಾರ್ಕೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಳಿಕ ಸುಮಾರು 10 ಸಾವಿರ ಚಕ್ಕುಲಿಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು. ವಿಶೇಷವಾಗಿ ಶಂಕರ್ ನಾಯಕ್ ಅವರ ತಂಡ ಸ್ಥಳದಲ್ಲೇ ಚಕ್ಕುಲಿ ತಯಾರಿಸಿ ಸಾರ್ವಜನಿಕರಿಗೆ ವಿತರಿಸುವ ಮೂಲಕ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಗಮನ ಸೆಳೆಯಿತು.

Ads on article

Advertise in articles 1

advertising articles 2

Advertise under the article