-->
ಮಧ್ಯರಾತ್ರಿ 12.12ಕ್ಕೆ ಶಿರೂರು ಶ್ರೀಗಳಿಂದ  ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ

ಮಧ್ಯರಾತ್ರಿ 12.12ಕ್ಕೆ ಶಿರೂರು ಶ್ರೀಗಳಿಂದ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ


ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದ್ದು, ಭಕ್ತಿಭಾವದ ವಾತಾವರಣದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಹಾಗೂ ಅರ್ಘ್ಯ ಪ್ರದಾನ ನೆರವೇರಿತು.


ಶ್ರಾವಣ ಮಾಸದ ಕೃಷ್ಣಪಕ್ಷದ ಅಷ್ಟಮಿ ತಿಥಿಯಾದ ಶುಕ್ರವಾರ ಮಧ್ಯರಾತ್ರಿ 12.12 ಗಂಟೆಗೆ ಶ್ರೀಕೃಷ್ಣನಿಗೆ ವಿಶೇಷ ಅರ್ಘ್ಯ ಪ್ರದಾನ ಮಾಡಲಾಯಿತು.


ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶಂಖದಲ್ಲಿ ಹಾಲು ಮತ್ತು ನೀರನ್ನು ತುಂಬಿ ಶ್ರೀಕೃಷ್ಣನ ವಿಗ್ರಹಕ್ಕೆ ಹಾಗೂ ಚಂದ್ರನಿಗೆ ಭಕ್ತಿಪೂರ್ವಕವಾಗಿ ಅರ್ಘ್ಯ ಸಮರ್ಪಿಸಿದರು.



ಸ್ವಾಮೀಜಿಯವರಿಂದ ಕೃಷ್ಣಾರ್ಘ್ಯ ಪ್ರದಾನ ನಡೆದ ಬಳಿಕ, ಮಠಕ್ಕೆ ಆಗಮಿಸಿದ್ದ ಸಹಸ್ರಾರು ಭಕ್ತರು ಸರದಿಯಲ್ಲಿ ನಿಂತು ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿ ಪುನೀತರಾದರು.

ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಕ್ತರ ಸಂಭ್ರಮ ಮುಗಿಲು ಮುಟ್ಟಿತ್ತು.

Ads on article

Advertise in articles 1

advertising articles 2

Advertise under the article