ಉಡುಪಿ ಜಿಲ್ಲೆಯಲ್ಲಿ ಸೆ.14, 16,18ರಂದು ಮದ್ಯ ಮಾರಾಟ ನಿಷೇಧ
Friday, September 11, 2026
ಶಾಂತಿಯುತ ಗಣೇಶೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ದೃಷ್ಟಿಯಿಂದ ಸೆ. 14, 16 ಮತ್ತು 18ರಂದು ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಆದೇಶ ಹೊರಡಿಸಿದ್ದಾರೆ.
ಸೆ.14ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸೆ.16ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸೆ.18ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಗಣೇಶ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳಲ್ಲೂ ಈ ನಿಷೇಧ ಜಾರಿಯಲ್ಲಿರಲಿದೆ.
ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದ್ದು, ನಿಗದಿತ ಅವಧಿಯಲ್ಲಿ ಮದ್ಯದಂಗಡಿಗಳು, ಬಾರ್‌ಗಳು ಹಾಗೂ ಮದ್ಯ ಮಾರಾಟ ಮಾಡುವ ಇತರ ಸಂಸ್ಥೆಗಳು ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿದ್ದಾರೆ.