-->
 ಇಬ್ಬರು ಮಕ್ಕಳನ್ನು ಬಾವಿಗೆಸೆದ ಮಹಿಳೆಗೆ 15 ದಿನಗಳ ನ್ಯಾಯಾಂಗ ಬಂಧನ

ಇಬ್ಬರು ಮಕ್ಕಳನ್ನು ಬಾವಿಗೆಸೆದ ಮಹಿಳೆಗೆ 15 ದಿನಗಳ ನ್ಯಾಯಾಂಗ ಬಂಧನ


ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಪುಟ್ಟ ಮಕ್ಕಳನ್ನು ಬಾವಿಗೆಸೆದು, ಓರ್ವ ಕಂದನ ಸಾವಿಗೆ ಕಾರಣಳಾದ ಆರೋಪದಡಿ ಬಂಧಿಸಲ್ಪಟ್ಟಿರುವ ನೂರುನ್ನಿಸಾಳಿಗೆ ಪುತ್ತೂರು ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಉಪ್ಪಿನಂಗಡಿ ಸಮೀಪದ ಪೆರ್ನೆ ಮೈರಕಟ್ಟೆ ನಿವಾಸಿಗಳಾದ ಸಿನಾನ್ ಹಾಗೂ ಅವರ ಪತ್ನಿ ನೂರುನ್ನಿಸಾ ನಡುವೆ ಫೋನ್‌ನಲ್ಲಿ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ನಡೆದಿತ್ತು ಎನ್ನಲಾಗಿದೆ. ಇದರಿಂದ ಕೋಪಗೊಂಡ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಮೂರುವರೆ ವರ್ಷದ ಹೆಣ್ಣು ಮಗು ಹಾಗೂ ಪತಿಯ ತಂಗಿಯ ಸುಮಾರು ಮೂರು ವರ್ಷದ ಗಂಡು ಮಗುವನ್ನು ಮನೆ ಸಮೀಪದ ಬಾವಿಗೆ ಎಸೆದಿದ್ದಾಳೆ ಎನ್ನಲಾಗಿದೆ.

ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು, ಕೃತ್ಯ ಎಸಗಿದ ಬಳಿಕ ಮನೆಯಲ್ಲೇ ಇದ್ದ ನೂರುನ್ನಿಸಾಳನ್ನು ಬಂಧಿಸಿದ್ದರು. ಸೆ.20ರಂದು ಆರೋಪಿಯನ್ನು ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

Ads on article

Advertise in articles 1

advertising articles 2

Advertise under the article