-->
ಅಕ್ರಮ ಜಾನುವಾರು ಸಾಗಾಟ : ಓರ್ವ ಆರೋಪಿ ಬಂಧನ, 17 ಜಾನುವಾರುಗಳ ರಕ್ಷಣೆ

ಅಕ್ರಮ ಜಾನುವಾರು ಸಾಗಾಟ : ಓರ್ವ ಆರೋಪಿ ಬಂಧನ, 17 ಜಾನುವಾರುಗಳ ರಕ್ಷಣೆ


ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಂಕನಾಡಿ ನಗರ ಪೊಲೀಸರು ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. 

ಲಾರಿಯಲ್ಲಿದ್ದ 17 ಜಾನುವಾರುಗಳನ್ನು ರಕ್ಷಿಸಲಾಗಿದ್ದು, ಪರಾರಿಯಾಗಿರುವ ಇಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸೆ.22ರಂದು ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸರು ಬೆಳಗಿನ ಜಾವ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, EICHER ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಲಭಿಸಿತ್ತು. ಬೆಳಗ್ಗೆ ಸುಮಾರು 6.30ರ ವೇಳೆಗೆ ಆಡ್ಯಾರು ಕಡೆಯಿಂದ ಮಂಗಳೂರು ನಗರದತ್ತ ಬರುತ್ತಿದ್ದ ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ಲಾರಿಯನ್ನು ತಡೆದು ನಿಲ್ಲಿಸಿದಾಗ ಲಾರಿಯಲ್ಲಿದ್ದ ಓರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿದ್ದಾನೆ.

ಲಾರಿಯ ಚಾಲಕ ಹಾಸನ ಜಿಲ್ಲೆಯ ಸಾದಿಕ್ ಜಿ. (23) ಎಂಬಾತನನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.  ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಪರಾರಿಯಾಗಿರುವ ಆರೋಪಿಗಳಾದ ಸುಬಾನ್ ಮತ್ತು ರೆಹಮಾನ್ ಅವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. 

Ads on article

Advertise in articles 1

advertising articles 2

Advertise under the article