-->
ಬಂಟ್ವಾಳ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, 80 ಸಾವಿರ ದಂಡ

ಬಂಟ್ವಾಳ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, 80 ಸಾವಿರ ದಂಡ


ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಅಬ್ದುಲ್ ಲತಿಫ್ ಶಿಕ್ಷೆಗೆ ಒಳಗಾದ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 141/2025ರ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆ-2012ರ ವಿವಿಧ ಕಲಂಗಳು ಹಾಗೂ ಬಿಎನ್‌ಎಸ್‌-2023ರ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖಾಧಿಕಾರಿ ಹಾಗೂ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಬಳಿಕ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಸೇರಿದಂತೆ ಮೂವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-2ರಲ್ಲಿ ನಡೆದಿದ್ದು, ಅಬ್ದುಲ್ ಲತಿಫ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಸೆಪ್ಟೆಂಬರ್ 19ರಂದು ತೀರ್ಪು ಪ್ರಕಟಿಸಿದರು.

ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 80 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Ads on article

Advertise in articles 1

advertising articles 2

Advertise under the article