ಉಚ್ಚಿಲ ಶ್ರೀ ಮಹಾಲಕ್ಷ್ಮಿ ಸನ್ನಿಧಿಯಲ್ಲಿ "ಉಚ್ಚಿಲ ದಸರಾ- 2026" ಆಮಂತ್ರಣ ಪತ್ರಿಕೆ ಬಿಡುಗಡೆ
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಶ್ರೀಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ 5ನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಸ್ಥಾನದಲ್ಲಿ ನೆರವೇರಿತು.
ದೇವಳದ ಪ್ರಧಾನ ಆರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ದ.ಕ. ಮಹಾಜನ ಸಂಘದ ಗೌರವಾಧ್ಯಕ್ಷ ನಾಡೋಜ ಡಾ.ಜಿ.ಶಂಕರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಕಳೆದ 4 ವರ್ಷಗಳಲ್ಲಿ ವಿಶ್ವ ಪ್ರಸಿದ್ಧವಾಗಿ ನಡೆದ ಉಡುಪಿ ಉಚ್ಚಿಲ ದಸರಾ ಆಚರಣೆಯ 5ನೇ ವರ್ಷದ ಸಂಭ್ರಮಾಚರಣೆಗೆ ಸಕಲ ಸಿದ್ದತೆ ನಡೆಸಲಾಗುತ್ತಿದ್ದು, ಮಿತವ್ಯಯದೊಂದಿಗೆ ವೈಶಿಷ್ಟ್ಯಪೂರ್ಣವಾಗಿ ಮೊಗವೀರ ಆಚರಿಸಲಾಗುವುದು ಎಂದು ಹೇಳಿದರು.
ಶ್ರೀ ಮಹಾಲಕ್ಷ್ಮೀ ಮತ್ತು ನವದುರ್ಗೆಯರ ಆಶೀರ್ವಾದದೊಂದಿಗೆ ಉಚ್ಚಿಲ ದಸರಾ ಅದ್ದೂರಿಯಾಗಿ ನಡೆಯುತ್ತಾ ಬಂದಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಕಾರಣ ನಮ್ಮ ಇತಿಮಿತಿಯಲ್ಲಿ ಈ ಬಾರಿಯ 5ನೇ ವರ್ಷದ ದಸರಾ ಅ.11ರಿಂದ 21ರವರೆಗೆ ಆಚರಿಸಲಿದ್ದೇವೆ. ಕಳೆದ ಬಾರಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಶೇಷ ಆಕರ್ಷಣೆಗಳು ಇರಲಿದೆ. ಬಾರಿಯಂತೆ ಈ ದಸರಾ ಕಾರ್ಯಕ್ರಮವನ್ನು ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಎಂ.ಲಮಾಣಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಆರೋಗ್ಯ ಸಚಿವ ಯು.ಟಿ. ಖಾದರ್ ಭಾಗವಹಿಸಲಿದ್ದಾರೆ. ಶೋಭಾಯಾತ್ರೆ ಈ ಹಿಂದಿನ ದಸರಾದಂತೆ ವಿಜೃಂಭಣೆಯಿಂದ ಜರುಗಲಿದೆ. 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಮಾಜದ 9ನೇ ಕುಲಗುರುಗಳ ಕಂಚಿನ ಪುತ್ಥಳಿ ಸೆ.25ರಂದು ಶ್ರೀ ಕ್ಷೇತ್ರದಲ್ಲಿ ಸಚಿವ ಶಿವರಾಜ್ ತಂಗಡಗಿ ಹಾಗೂ ಗಣ್ಯರ ಸಮ್ಮುಖ ಅನಾವರಣಗೊಳ್ಳಲಿದೆ ಎಂದರು.
ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ ಮಾತನಾಡಿ, ಈಗಾಗಲೇ ಉಪ ಸಮಿತಿಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ಶಿಸ್ತುಬದ್ಧ, ಅಚ್ಚುಕಟ್ಟಿನ ಮಹೋತ್ಸವ ಅನಾವರಣಗೊಳ್ಳಲಿದೆ ಎಂದರು.
ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ ಮಲ್ಪೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ರತ್ನಾಕರ್ ಸಾಲ್ಯಾನ್ ಮಲ್ಪೆ ಸುಜಿತ್ ಸಾಲ್ಯಾನ್ ಮೂಲ್ಕಿ, ಗುಂಡು ಬಿ. ಅಮೀನ್ ಕಿದಿಯೂರು, ವಾಸುದೇವ ಸಾಲ್ಯಾನ್ ಕಟಪಾಡಿ, ಕವಿತಾ ಶರತ್ ಮಿತ್ರಪಟ್ಟ, ಸುಧಾಕರ್ ಕುಂದರ್ ಬಂಕೇರ್‌ಕಟ್ಟ ಮನೋಜ್ ಕಾಂಚನ್ ಎರ್ಮಾಳ್, ದಿನೇಶ್ ಮೂಳೂರು, ಮೋಹನ್ ಬಂಗೇರ ಕಾಪು, ಶಿವಪ್ಪ ಕಾಂಚನ್ ಮಲ್ಪೆ, ವಿಶ್ವಾಸ್ ವಿ.ಅಮೀನ್, ಕಿರಣ್ ಕುಮಾರ್ ಉದ್ಯಾವರ, ಸತೀಶ್ ಕುಂದರ್ ಮಲ್ಪೆ, ನಾರಾಯಣ ನಾರಾಯಣ ಸಿ.ಕರ್ಕೇರ, ಸುಗುಣ ಎಸ್.ಕರ್ಕೇರ, ಗೌತಮ್ ಕೋಡಿಕಲ್, ಪವನ್ ಆನಂದ್ ಎರ್ಮಾಳು, ಸುಧಾಕರ ಸುವರ್ಣ ಎರ್ಮಾಳು, ಗುರುವಪ್ಪ ಕೋಟ್ಯಾನ್, ಅಶೋಕ್ ಸುವರ್ಣ, ಏಕನಾಥ ಕರ್ಕೇರ, ಯಜೇಶ್ ಕರ್ಕೇರ, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಉಪಸ್ಥಿತರಿದ್ದರು.
