-->
ಸೆ. 25: 'ಪ್ರೇರಣಾ ದಿವಸ್’  ಶೈಕ್ಷಣಿಕ ಸಾಧಕ ಅಧ್ಯಾಪಕರಿಗೆ ಗೌರವ ಕಾರ್ಯಕ್ರಮ

ಸೆ. 25: 'ಪ್ರೇರಣಾ ದಿವಸ್’ ಶೈಕ್ಷಣಿಕ ಸಾಧಕ ಅಧ್ಯಾಪಕರಿಗೆ ಗೌರವ ಕಾರ್ಯಕ್ರಮ


ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು ಪ್ರತೀ ವರ್ಷದಂತೆ ಈ ವರ್ಷವೂ ಹಮ್ಮಿಕೊಂಡಿರುವ ಪ್ರೇರಣಾ ದಿವಸ್ ಕಾರ್ಯಕ್ರಮವು ಸೆ. 25ರಂದು ಉಡುಪಿಯ ಕಿದಿಯೂರು ಹೊಟೇಲಿನ ಮಾಧವ ಕೃಷ್ಣ ಸಭಾಭವನದಲ್ಲಿ ನಡೆಯಲಿದೆ ಎಂದು ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ.ಕೆ ತಿಳಿಸಿದ್ದಾರೆ.

ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಪ್ರತೀ ವರ್ಷದಂತೆ ಈವರ್ಷವೂ ದ.ಕ, ಉಡುಪಿ, ಕೊಡಗು ಜಿಲ್ಲೆಗಳ ಅಧ್ಯಾಪಕರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. 

ಶಿಕ್ಷಣ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಕರಾವಳಿಯ ಸಾಂಸ್ಕೃತಿಕ ರಾಯಭಾರಿ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್‌ ಆಳ್ವ ಅವರನ್ನು ಗುರುತಿಸಲಾಗಿದೆ. ಅತ್ಯುತ್ತಮ ಆಡಳಿತಗಾರರು ಪ್ರಶಸ್ತಿಗೆ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರಾದ ಸಿ. ಎ. ಗೋಪಾಲಕೃಷ್ಣ ಭಟ್, ಗೋವಿಂದ ದಾಸ ಕಾಲೇಜಿನ ಆಡಳಿತ ನಿರ್ದೇಶಕರಾದ ಪ್ರೊ. ರಮೇಶ್ ಭಟ್ ಎಸ್. ಜಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಂಶುಪಾಲರಾದ ಡಾ. ಪದ್ಮನಾಭ ಎಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷ ಡಾ. ಭೋಜ ಪೂಜಾರಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಪ್ರೊ.ಅಜಕ್ಕಳ ಗಿರೀಶ್ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರು ಇಲ್ಲಿನ ಪ್ರಾಂಶುಪಾಲರಾದ ಪ್ರೊ.ಸುಬ್ಬಪ್ಪ ಕೈಕಂಬ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇಲ್ಲಿನ ಪ್ರಾಂಶುಪಾಲರಾದ ಡಾ.ಪ್ರಕಾಶ್ ಚಂದ್ರ ಶಿಶಿಲ ಹಾಗೂ ಬೆಸೆಂಟ್ ಮಹಿಳಾ ಕಾಲೇಜು ಮಂಗಳೂರು ಇಲ್ಲಿನ ಪ್ರಾಂಶುಪಾಲರಾದ ಡಾ. ಪ್ರವೀಣ್ ಕೆ ಸಿ ಅವರನ್ನು ಆಯ್ಕೆ ಮಾಡಲಾಗಿದೆ.

ಅತ್ಯುತ್ತಮ ಗ್ರಂಥಪಾಲಕರು ವಿಭಾಗದಲ್ಲಿ ಎಸ್ ಡಿ ಎಮ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಉಜಿರೆ ಇಲ್ಲಿನ ಗ್ರಂಥಪಾಲಕರಾದ ಡಾ.ರಜತ ಪಿ ಶೆಟ್ಟಿ ಹಾಗೂ ಕಾವೇರಿ ಕಾಲೇಜು ವಿರಾಜಪೇಟೆ ಇಲ್ಲಿನ ಗ್ರಂಥಪಾಲಕರಾದ ಡಾ. ಮುತ್ತಮ್ಮ ಎ. ಆರ್ ಇವರನ್ನು ಆಯ್ಕೆ ಮಾಡಲಾಗಿದೆ.

ಅತ್ಯುತ್ತಮ ದೈಹಿಕ ಶಿಕ್ಷಕರು ವಿಭಾಗದಲ್ಲಿ ಮಂಜುನಾಥ ಪೈ ಮಂಜು ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜಯಭಾರತಿ ಎ ಮತ್ತು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಮಡಿಕೇರಿ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ. ರಾಕಿ ಪೂವಣ್ಣ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಸೆಪ್ಟೆಂಬರ್ 26 ರಂದು ತ್ರಿಷಾ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಉಡುಪಿಯ ಕಿದಿಯೂರು ಹೋಟೇಲಿನ ಮಾಧವ ಕೃಷ್ಣ ಸಭಾಭವನದಲ್ಲಿ ನಡೆಯಲಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಷೇತ್ರಿಯ ಕಾರ್ಯವಾಹರಾದ  ಎನ್. ತಿಪ್ಪೇಸ್ವಾಮಿ,  ಕೇಂದ್ರ ಸಚಿವರಾದ  ವಿ ಸೋಮಣ್ಣ, ಉಡುಪಿ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ವಿಶ್ವ ವಿದ್ಯಾನಿಲಯದ  ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ, ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಅಶೋಕ್ ಸಂಗಪ್ಪ ಅಲೂರು ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಶಿಕ್ಷಕ ಸಂಘದ ಪ್ರಮುಖರಾದ ಡಾ. ಸುಧಾ, ಡಾ. ಚಿತ್ತರಂಜನ್ ಭಟ್, ಜಯಲಕ್ಷ್ಮಿ ಶೆಟ್ಟಿ, ಸುರೇಂದ್ರ ಶೆಟ್ಟಿ, ಧೀರಜ್, ಪ್ರಜ್ನಾ ಮಾರ್ಪಳ್ಳಿ, ಯಶೋಧ ಮೊದಲಾದವರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article