-->
 ಸೆ.27ರ ಭಾನುವಾರದಂದು ಬ್ಯಾಂಕ್‌ಗಳಿಗೆ ರಜೆ ಇಲ್ಲ...!

ಸೆ.27ರ ಭಾನುವಾರದಂದು ಬ್ಯಾಂಕ್‌ಗಳಿಗೆ ರಜೆ ಇಲ್ಲ...!


ಬ್ಯಾಂಕ್ ನೌಕರರ ಒಕ್ಕೂಟಗಳಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್‌ ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಕ್ರಮ ಕೈಗೊಂಡಿದೆ.

ಸೆಪ್ಟೆಂಬರ್ 27ರ ಭಾನುವಾರದಂದು ದೇಶದ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳು   ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು  ಸಾಮಾನ್ಯ ಕಾರ್ಯದಿನದಂತೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಈ ನಿರ್ಧಾರಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್‌  ಕೂಡ ಅನುಮೋದನೆ ನೀಡಿದೆ.

ಸೆಪ್ಟೆಂಬರ್ 26 ನಾಲ್ಕನೇ ಶನಿವಾರವಾಗಿದ್ದು, ಸೆಪ್ಟೆಂಬರ್ 27 ಭಾನುವಾರವಾಗಿರುವುದರಿಂದ ಬ್ಯಾಂಕ್‌ಗಳಿಗೆ ರಜೆ ಇತ್ತು. ಇದರ ಬೆನ್ನಲ್ಲೇ ಸೆ.28ರಿಂದ 30ರವರೆಗೆ ಮೂರು ದಿನಗಳ ಮುಷ್ಕರ ನಡೆದರೆ ಸತತ ಐದು ದಿನಗಳ ಕಾಲ ಬ್ಯಾಂಕಿಂಗ್ ಸೇವೆಗಳಿಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇತ್ತು.

ಗ್ರಾಹಕರ ತುರ್ತು ಬ್ಯಾಂಕಿಂಗ್ ಅಗತ್ಯತೆಗಳಿಗೆ ದೀರ್ಘಕಾಲದ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭಾನುವಾರವೂ ಬ್ಯಾಂಕ್‌ಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಬ್ಯಾಂಕ್ ಶಾಖೆಗಳು, ಕಚೇರಿಗಳು, ಎಟಿಎಂ ಲಿಂಕ್ ಹೊಂದಿರುವ ಶಾಖೆಗಳು ಹಾಗೂ ಕರೆನ್ಸಿ ಚೆಸ್ಟ್‌ಗಳು ಸೆ.27ರಂದು ಕಾರ್ಯನಿರ್ವಹಿಸಲಿವೆ.

ಬ್ಯಾಂಕ್ ಗ್ರಾಹಕರ ಅನುಕೂಲ ಮತ್ತು ಸಾರ್ವಜನಿಕರ ಹಿತಾಸಕ್ತಿಗೆ ಸರ್ಕಾರ ಆದ್ಯತೆ ನೀಡುತ್ತಿದ್ದು, ಅಗತ್ಯ ಬ್ಯಾಂಕಿಂಗ್ ಸೇವೆಗಳು ನಿರಂತರವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Ads on article

Advertise in articles 1

advertising articles 2

Advertise under the article