-->
ಎಸ್.ಡಿ.ಎಂ ಕಾಲೇಜು ವತಿಯಿಂದ ಸೆ.30, ಅ.1ರಂದು ‘ಕ್ಷಮತ್ವಂ-2026’

ಎಸ್.ಡಿ.ಎಂ ಕಾಲೇಜು ವತಿಯಿಂದ ಸೆ.30, ಅ.1ರಂದು ‘ಕ್ಷಮತ್ವಂ-2026’


ಉಡುಪಿ ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌.ಡಿ.ಎಂ) ಆಯುರ್ವೇದ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಸೆ. 30 ಮತ್ತು ಅಕ್ಟೋಬರ್ 1ರಂದು ‘ಕ್ಷಮತ್ವಂ-2026’ ಆರನೇ ಅಂತರರಾಷ್ಟ್ರೀಯ ಸಮ್ಮೇಳನ ಜರುಗಲಿದೆ.

ಉಡುಪಿ ಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ., ಸಮ್ಮೇಳನಕ್ಕೆ ಮೊದಲು ಸೆ.29ರಂದು ಪೂರ್ವಭಾವಿ ಕಾರ್ಯಾಗಾರ ನಡೆಯಲಿದೆ. ಸಮ್ಮೇಳನದಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ಸಂಶೋಧಕರು, ವೈದ್ಯರು, ಶಿಕ್ಷಕರು ಹಾಗೂ ಆಯುರ್ವೇದ ಕ್ಷೇತ್ರದ ಪರಿಣಿತರು ಪಾಲ್ಗೊಳ್ಳುವರು ಎಂದರು.

ಸಮ್ಮೇಳನದಲ್ಲಿ ಆಯುರ್ವೇದದ ದೃಷ್ಟಿಕೋನದಿಂದ ಆಟೋ ಇಮ್ಯೂನ್ ಕಾಯಿಲೆಗಳ ನಿರ್ವಹಣೆಗೆ ಸಂಬಂಧಿಸಿದ ಹೊಸ ಸಾಧ್ಯತೆಗಳ ಕುರಿತು ಚರ್ಚೆ ನಡೆಯಲಿದೆ ಎಂದು ವಿವರಿಸಿದರು.

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವರು. ಆರೋಗ್ಯ ಸಚಿವ ಯು.ಟಿ. ಖಾದರ್‌ ಅವರು ಉದ್ಘಾಟಿಸುವರು ಎಂದು ಹೇಳಿದರು.

ಎರಡು ದಿನಗಳ ವೈಜ್ಞಾನಿಕ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಳು, ವಿಶೇಷ ವೈಜ್ಞಾನಿಕ ಅಧಿವೇಶನಗಳು, ಪ್ಯಾನೆಲ್ ಚರ್ಚೆಗಳು, ಸಂಶೋಧನಾ ಪ್ರಬಂಧ ಮಂಡನೆ ಹಾಗೂ ಪೋಸ್ಟರ್ ಪ್ರದರ್ಶನಗಳು ನಡೆಯಲಿವೆ ಎಂದು ವಿವರಿಸಿದರು. 

ಸುದ್ದಿಗೋಷ್ಠಿಯಲ್ಲಿ ಡಾ. ಚೈತ್ರಾ ಹೆಬ್ಬಾರ್, ಡಾ. ನಾಗರಾಜ್‌, ಡಾ. ಪ್ರಸನ್ನ ಮೊಗಸಾಲೆ, ಡಾ. ಅನಂತ್‌ ಕುಮಾರ್‌, ಡಾ. ಅರ್ಪಣಾ ಜೈನ್‌ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article