-->
ಉಡುಪಿಯಲ್ಲಿ ವಿಟ್ಲಪಿಂಡಿ ಸಡಗರ: 30 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾನ

ಉಡುಪಿಯಲ್ಲಿ ವಿಟ್ಲಪಿಂಡಿ ಸಡಗರ: 30 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾನ


ಶ್ರೀಕೃಷ್ಣನ ನಾಡು ಉಡುಪಿಯಲ್ಲಿ ಇಂದು ವಿಟ್ಲಪಿಂಡಿಯ ಸಂಭ್ರಮ ಮನೆ ಮಾಡಿದೆ. ವಿಟ್ಲಪಿಂಡಿ ಹಾಗೂ ಶ್ರಾವಣ ಶನಿವಾರದ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪಲ್ಲಪೂಜೆ ನೆರವೇರಿಸಿದರು.


ಅನ್ನದ ರಾಶಿಗೆ ಸಟ್ಟುಗ ಹಾಕುವ ಮೂಲಕ ಶ್ರೀಪಾದರು ಪಲ್ಲಪೂಜೆಗೆ ಚಾಲನೆ ನೀಡಿದರು. ಶ್ರೀಕೃಷ್ಣನ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ಭಕ್ತಿಭಾವದಿಂದ ನೆರವೇರಿದವು.

ವಿಟ್ಲಪಿಂಡಿ ಮಹೋತ್ಸವದ ಅಂಗವಾಗಿ ಇಂದು ಶ್ರೀಕೃಷ್ಣ ಮಠದಲ್ಲಿ ಸುಮಾರು ಮೂವತ್ತು ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ. ದೇಶದ ವಿವಿಧೆಡೆಯಿಂದ ಆಗಮಿಸಿರುವ ಭಕ್ತರು ಶ್ರೀಕೃಷ್ಣನ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article