-->
ಖ್ಯಾತ ಡ್ರಮ್ಮರ್ ದೇವಾ ನಿಧನ: 64ನೇ ವಯಸ್ಸಿನಲ್ಲಿ ಸಂಗೀತ ಲೋಕಕ್ಕೆ ವಿದಾಯ

ಖ್ಯಾತ ಡ್ರಮ್ಮರ್ ದೇವಾ ನಿಧನ: 64ನೇ ವಯಸ್ಸಿನಲ್ಲಿ ಸಂಗೀತ ಲೋಕಕ್ಕೆ ವಿದಾಯ


ಕನ್ನಡ ಚಿತ್ರರಂಗ ಹಾಗೂ ಸಂಗೀತ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ, ಕನ್ನಡದ ಶಿವಮಣಿ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವಾ ಅವರು 64ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ರಾತ್ರಿ ಸುಮಾರು 10 ಗಂಟೆಗೆ ದೇವಾ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

ದೇವಾ ಅವರು ಪಾರ್ಶ್ವವಾಯು (ಪೆರಾಲಿಸಿಸ್) ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಇದಕ್ಕೂ ಮುನ್ನ ಗ್ಯಾಂಗ್ರೀನ್ ಸಮಸ್ಯೆಯಿಂದಾಗಿ ಅವರ ಬಲಗಾಲನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿತ್ತು. ಬಳಿಕ ಸ್ಟ್ರೋಕ್‌ನ ಪರಿಣಾಮ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಮನೆಯಲ್ಲೇ ನಿರಂತರ ಚಿಕಿತ್ಸೆ ಪಡೆಯುತ್ತಿದ್ದ ದೇವಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಹಾಗೂ ಸಂಗೀತ ಕ್ಷೇತ್ರದ ಗಣ್ಯರು, ಕಲಾವಿದರು ಮತ್ತು ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

Ads on article

Advertise in articles 1

advertising articles 2

Advertise under the article