ಕಿನ್ನಿಮೂಲ್ಕಿ ಗಣೇಶೋತ್ಸವಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ
Friday, September 18, 2026
ಉಡುಪಿ ನಗರದ ಕಿನ್ನಿಮೂಲ್ಕಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗಣಪತಿಕಟ್ಟೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಅವರು ಸಚಿವ ಸಂತೋಷ್ ಲಾಡ್ ಅವರನ್ನು ಗೌರವಿಸಿದರು. ಗಣೇಶೋತ್ಸವದ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಚಿವರು ಕೆಲಕಾಲ ವೀಕ್ಷಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಅಮೃತಾ ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
