-->
 ಉರ್ದುವಿಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ

ಉರ್ದುವಿಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ


ಕರ್ನಾಟಕದಲ್ಲಿ ಉರ್ದು ಭಾಷೆಗೂ ಅಧಿಕೃತ ಭಾಷಾ ಸ್ಥಾನಮಾನ ನೀಡುವಂತೆ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 4,236 ಉರ್ದು ಮಾಧ್ಯಮ ಶಾಲೆಗಳಿದ್ದು, ತೆಲಂಗಾಣ ಮಾದರಿಯಲ್ಲಿ ಉರ್ದುವಿಗೆ ಅಧಿಕೃತ ಸ್ಥಾನಮಾನ ನೀಡಬೇಕು. ಇದರಿಂದ ಕನ್ನಡ ಭಾಷೆಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ ಹಾಗೂ ಮಾಹಿತಿ ಒದಗಿಸುವುದು, ಉರ್ದು ಶಾಲೆಗಳ ಖಾಲಿ ಶಿಕ್ಷಕರ ಹುದ್ದೆ ಭರ್ತಿ ಮತ್ತು ಸರ್ಕಾರಿ ನೇಮಕಾತಿ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ಉರ್ದುವಿನಲ್ಲೂ ನೀಡುವಂತೆ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷಾ ಸ್ಥಾನಮಾನ ನೀಡುವುದಾಗಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದರು.

Ads on article

Advertise in articles 1

advertising articles 2

Advertise under the article