-->
 ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಣಿಪಾಲದಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಣಿಪಾಲದಲ್ಲಿ ಪ್ರತಿಭಟನೆ


ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಹಾಗೂ ದಲಿತರ ಭೂಮಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದಲಿತ ಹಕ್ಕುಗಳ ಸಮಿತಿ (DHS) ರಾಜ್ಯ ಸಮಿತಿ ನೀಡಿದ ಕರೆಯ ಮೇರೆಗೆ ಸೋಮವಾರ ಮಣಿಪಾಲದಲ್ಲಿ ಪ್ರತಿಭಟನೆ ನಡೆಯಿತು.


ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಮಿತಿ, ಸಿಐಟಿಯು ಉಡುಪಿ ಜಿಲ್ಲಾ ಸಮಿತಿ, ಜನವಾದಿ ಮಹಿಳಾ ಸಂಘಟನೆ (JMS), ಡಿವೈಎಫ್‌ಐ, ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ, ಕೃಷಿಕೂಲಿಕಾರರ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳಿಗೆ ಆಕ್ರೋಶ ವ್ಯಕ್ತಪಡಿಸಿ, ಪ್ರಕರಣಗಳ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ದಲಿತರ ಭೂಮಿ ಸೇರಿದಂತೆ ದಲಿತ ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ನಂತರ ಅಪರ ಜಿಲ್ಲಾಧಿಕಾರಿ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು, ಕಾರ್ಯದರ್ಶಿ ರವಿ ವಿ.ಎಂ., ಮುಖಂಡರಾದ ಅಶ್ವಿನಿ ಲಾರೆನ್ಸ್ ಮೂಡುಬೆಳ್ಳೆ, ಮನೋಜ್ ಕುಮಾರ್, ನಾಗರತ್ನ ಆರ್. ನಾಡ, ಸುಶೀಲಾ ಬಳ್ಕೂರು, ಅಣ್ಣಪ್ಪ ಬಳ್ಕೂರು, ಬಾಬು ಬಳ್ಕೂರು, ದಯಾನಂದ ಮಲ್ಪೆ ಹಾಗೂ ರಾಮ ಕಾರ್ಕಡ ಭಾಗವಹಿಸಿದ್ದರು.

ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ್ ವಿ., ಕೋಶಾಧಿಕಾರಿ ಕವಿರಾಜ್ ಎಸ್. ಕಾಂಚನ್, ಉಪಾಧ್ಯಕ್ಷ ಎಚ್. ನರಸಿಂಹ, ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಡಿವೈಎಫ್‌ಐ ಮುಖಂಡರಾದ ಸೈಯಾದ್ ಹಾಗೂ ಮುರಳಿ, ಜನವಾದಿ ಮಹಿಳಾ ಸಂಘದ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಮುಖಂಡರಾದ ಬಲ್ಕೀಸ್ ಮತ್ತು ಸುನೀತಾ ಶೆಟ್ಟಿ, ಕೃಷಿಕೂಲಿಕಾರರ ಸಂಘದ ಜಿಲ್ಲಾ ಮುಖಂಡರಾದ ನಾಗರತ್ನ ನಾಡ, ಇದ್ರೀಸ್ ಹೂಡೆ ಹಾಗೂ ಹಯವದನ ಮೂಡುಸಗ್ರಿ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article