ಉಡುಪಿ: ಕನಿಷ್ಠ ಕೂಲಿ ಸಮರ್ಪಕವಾಗಿ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ
Tuesday, September 29, 2026
ಕರ್ನಾಟಕ ಸರಕಾರ ತಡೆಹಿಡಿದಿರುವ ಕನಿಷ್ಠ ಕೂಲಿಯನ್ನು ಕೂಡಲೇ ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದ ನಿಯೋಗವು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರ ಕಚೇರಿಗೆ ತೆರಳಿ ಮನವಿ ಸಲ್ಲಿಸಿತು.
ಶಾಸಕರ ಕಚೇರಿಯಲ್ಲಿ ಅವರ ಆಪ್ತ ಸಹಾಯಕ ಅಕ್ಷಯ್ ಅವರ ಮೂಲಕ ಮನವಿ ಸಲ್ಲಿಸಲಾಯಿತು. ಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ ಸಮರ್ಪಕವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ಕಾರ್ಮಿಕ ವರ್ಗಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ನಿಯೋಗ ಒತ್ತಾಯಿಸಿತು.
ನಿಯೋಗದಲ್ಲಿ ಉಡುಪಿ ಸಿಐಟಿಯು ವಲಯ ಸಂಚಾಲಕ ಕವಿರಾಜ್ ಎಸ್. ಕಾಂಚನ್, ಉಡುಪಿ ಬೀಡಿ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್., ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ, ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು, ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಸುಭಾಸ್ ಚಂದ್ರ ನಾಯಕ್, ಪ್ರಧಾನ ಕಾರ್ಯದರ್ಶಿ ಶಶಿಧರ್ ಗೊಲ್ಲ, ಮುಖಂಡರಾದ ದಯಾನಂದ ಕೋಟ್ಯಾನ್, ಮುರಳಿ, ಸೈಯಾದ್ ಹಾಗೂ ಸಿಐಟಿಯು ಮುಖಂಡ ಪ್ರಭಾಕರ್ ಕುಂದರ್ ಉಪಸ್ಥಿತರಿದ್ದರು.
.jpeg)