-->
 ಸಚಿವ ಸಂಪುಟ ಸಭೆಗೆ ಆಗಮಿಸಿದ ಸಿಎಂ ಡಿಕೆಶಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ

ಸಚಿವ ಸಂಪುಟ ಸಭೆಗೆ ಆಗಮಿಸಿದ ಸಿಎಂ ಡಿಕೆಶಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ


ಮಂಗಳೂರಿನ ಪ್ರಜಾ ಸೌಧದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರಿಗೆ ಕರಾವಳಿಯ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತದೊಂದಿಗೆ ಆತಿಥ್ಯ ನೀಡಲಾಯಿತು.


ಮುಖ್ಯಮಂತ್ರಿ ಹಾಗೂ ಸಚಿವರು ಐರಾವತ ಬಸ್‌ನಲ್ಲಿ ಕದ್ರಿ ಯುದ್ಧ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು. ಬಳಿಕ ಪಂಪ್‌ವೆಲ್‌ಗೆ ಆಗಮಿಸಿದ ಅವರು, ತೆರೆದ ಡಬಲ್ ಡೆಕ್ಕರ್ ಬಸ್‌ನಲ್ಲಿ ಪಂಪ್‌ವೆಲ್‌ನಿಂದ ಪಡೀಲ್‌ನ ಪ್ರಜಾ ಸೌಧದವರೆಗೆ ಮೆರವಣಿಗೆಯಲ್ಲಿ ಸಾಗಿದರು. ಮಾರ್ಗದುದ್ದಕ್ಕೂ ಸಾರ್ವಜನಿಕರು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಸ್ವಾಗತ ಕೋರಿದರು.


ಪ್ರಜಾ ಸೌಧದ ಪ್ರವೇಶದ್ವಾರದಲ್ಲಿ ಕಲ್ಲಡ್ಕದ ಸಾಂಪ್ರದಾಯಿಕ ಗೊಂಬೆ ಪ್ರದರ್ಶನ ಹಾಗೂ ಪೂರ್ಣಕುಂಭದೊಂದಿಗೆ ಮುಖ್ಯಮಂತ್ರಿ ಮತ್ತು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಪ್ರಜಾ ಸೌಧದ ಆವರಣ ಪ್ರವೇಶಿಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರೊಂದಿಗೆ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ನಂತರ ಪ್ರಜಾ ಸೌಧದ ಎದುರಿನ ಧ್ವಜಸ್ತಂಭದ ಬಳಿ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸದಸ್ಯರು ಗುಂಪು ಛಾಯಾಚಿತ್ರಕ್ಕೆ ಪೋಸ್ ನೀಡಿದರು. ಈ ಮೂಲಕ ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯ ಆರಂಭದ ಕ್ಷಣಗಳನ್ನು ಸ್ಮರಣೀಯಗೊಳಿಸಿದರು.

Ads on article

Advertise in articles 1

advertising articles 2

Advertise under the article