-->
 ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ


ಪೋಕ್ಸೋ ಪ್ರಕರಣವೊಂದರಲ್ಲಿ ವಿಚಾರಣೆಗಾಗಿ ಕೋರ್ಟ್ ಗಾಗಿ ಹಾಜರಾಗದೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಕಾಯ್ದೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತನ ವಿರುದ್ಧ ವಾರಂಟ್ ಜಾರಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಹೆಡ್ ಕಾನ್‌ಸ್ಟೆಬಲ್ ದಯಾನಂದ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ರವಿರಾಜ್ ಅವರು ಸೆಪ್ಟೆಂಬರ್ 10ರಂದು ನೆಲ್ಯಾಡಿಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ads on article

Advertise in articles 1

advertising articles 2

Advertise under the article