-->
ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ: ಪ್ರತಿಕೃತಿ ದಹನ; ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನ!

ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ: ಪ್ರತಿಕೃತಿ ದಹನ; ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನ!


ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಗುಪ್ತಾ ಅವರು ಪ್ರಜಾಪ್ರಭುತ್ವಕ್ಕೆ ಮಾರಕವಾಗುವ ರೀತಿಯಲ್ಲಿ ಚುನಾವಣಾ ಆಯೋಗವನ್ನು ದುರುಪಯೋಗಪಡಿಸುತ್ತಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಃಟನೆ ನಡೆಯಿತು. 


ಈ ವೇಳೆ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ಸಹಿತ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ಪ್ರತಿಕೃತಿ ಸುಟ್ಟು ತಮ್ಮಆಕ್ರೋಷ ವ್ಯಕ್ತಪಡಿಸಿದರು. ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿದ ಕೆಲ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದ ಘಟನೆಯೂ ನಡೆಯಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಯರು ಗೇಟು ಮುಚ್ಚಿ ಪ್ರತಿಭಟನಾಕಾರರನ್ನು ತಡೆದರು. ಪ್ರತಿಭಟನಾಕಾರರು ಗೇಟು ಹತ್ತಿ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ ಮರಳಿದರು. 


ಮಾಜಿ ಶಾಸಕ ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಕುಮಾರ್ ಹೆಗ್ಡೆ, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಮೊಳಹಳ್ಳಿ ದಿನೇಶ್ ಹೆಗ್ಡೆ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, NSUI ಅಧ್ಯಕ್ಷ ಸೌರಭ್ ಬಲ್ಲಾಳ್, ವೆರೊನಿಕಾ ಕರ್ನೇಲಿಯೋ, ಜ್ಯೋತಿ ಹೆಬ್ಬಾರ್, ಹರಿಪ್ರಸಾದ್ ರೈ, ಸುನೀಲ್ ಬಂಗೇರ, ಅಮೃತ್ ಶೆಣೈ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. 


Ads on article

Advertise in articles 1

advertising articles 2

Advertise under the article