-->
 ಸ್ಫೋಟಕ ಬಳಸಿ ಬಂಡೆ ಸ್ಫೋಟಿಸಿದ ಪ್ರಕರಣ: ಇಬ್ಬರ ಬಂಧನ

ಸ್ಫೋಟಕ ಬಳಸಿ ಬಂಡೆ ಸ್ಫೋಟಿಸಿದ ಪ್ರಕರಣ: ಇಬ್ಬರ ಬಂಧನ


ಅಕ್ರಮವಾಗಿ ಸ್ಫೋಟಕ ಬಳಸಿ ಸರಕಾರಿ ಜಾಗದಲ್ಲಿರುವ ಬಂಡೆ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ಇನ್ನಾ ಗ್ರಾಮದ ತೋಡಿಕರ್ಮಾರ್ ನಿವಾಸಿ ಕೆ.ಗೋವಿಂದ ರಾಜ್(40) ಹಾಗೂ ವಿಜಯಪುರ ಮೂಲದ ಕಲ್ಯಾ ಹಾಳೆಕಟ್ಟೆ ನಿವಾಸಿ ಶೇಖಪ್ಪ ಚಲವಾದಿ (28) ಬಂಧಿತ ಆರೋಪಿಗಳು.

ಇವರು ಸೆ.5ರಂದು ಮರ್ಣೆ ಗ್ರಾಮದ ಕುಕ್ಕಿಪಲ್ಕೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಸಂಬಂದಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆದುಕೊಳ್ಳದೇ ಬಂಡೆ ಕಲ್ಲನ್ನು ಸ್ಫೋಟಕ ವಸ್ತುವನ್ನು ಅನಧಿಕೃತವಾಗಿ ಬಳಸಿ ಸ್ಫೋಟ ಮಾಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಮಣಿಪಾಲ ಠಾಣಾ ಎಸ್ಸೈ ತಿಮ್ಮೇಶ್ ಬಿ.ಎನ್. ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಟ್ಯಾಕ್ಟರ್, ಡ್ರಿಲ್ಲಿಂಗ್ ಮೆಷಿನ್, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Ads on article

Advertise in articles 1

advertising articles 2

Advertise under the article