ಉಡುಪಿ ಶ್ರೀಕೃಷ್ಣ ಮಠದಲ್ಲಿ ಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ
Sunday, September 06, 2026
ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಲೋಕಕ್ಷೇಮಕ್ಕಾಗಿ ಹಮ್ಮಿಕೊಳ್ಳಲಾಗಿದ್ದ ಶ್ರೀಕೃಷ್ಣನಿಗೆ ಕೋಟಿ ತುಳಸಿ ಅರ್ಚನೆಯು ಭಾನುವಾರ ಶ್ರೀಕೃಷ್ಣ ಮಠದಲ್ಲಿ ಭಕ್ತಿಭಾವದಿಂದ ಜರುಗಿತು.
ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಸಂಕಲ್ಪದಂತೆ ಈ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀಕೃಷ್ಣನಿಗೆ ತುಳಸಿ ಅರ್ಚನೆ ಸಲ್ಲಿಸುವ ಮೂಲಕ ಲೋಕದಲ್ಲಿ ಶಾಂತಿ, ಸುಖ, ಸಮೃದ್ಧಿ ಹಾಗೂ ರಾಷ್ಟ್ರದ ಕ್ಷೇಮಕ್ಕಾಗಿ ಪ್ರಾರ್ಥಿಸಲಾಯಿತು.