ಉಡುಪಿ ಶ್ರೀ ಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ
Tuesday, September 29, 2026
ತೆಲಂಗಾಣ ಸರ್ಕಾರದ ಪರಿಶಿಷ್ಟ ಜಾತಿಗಳ ಅಭಿವೃದ್ಧಿ, ಬುಡಕಟ್ಟು ಕಲ್ಯಾಣ, ವಿಕಲಚೇತನರ, ಹಿರಿಯ ನಾಗರಿಕ ಹಾಗೂ ಅಲ್ಪಸಂಖ್ಯಾತರ ಸಬಲೀಕರಣ ಸಚಿವರಾದ ಅದ್ಲೂರಿ ಲಕ್ಷ್ಮಣ್ ಕುಮಾರ್ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಸಚಿವರು ಶ್ರೀಕೃಷ್ಣನ ದರ್ಶನ ಪಡೆದು ಮಠದ ಧಾರ್ಮಿಕ ಪರಂಪರೆ ಹಾಗೂ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದುಕೊಂಡರು.
ಈ ವೇಳೆ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಸಚಿವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ವೆಂಕಟರಮಣ ಮುಚ್ಚಿಂತ್ತಾಯ ಉಪಸ್ಥಿತರಿದ್ದರು.
