-->
 ಕರಾವಳಿಯಲ್ಲಿ ಮಳೆ ಪ್ರಮಾಣ ಕೊಂಚ ಇಳಿಕೆ: ಬಿಸಿಲಿನ ಝಳಕ್ಕೆ ಜನ ಕಂಗಾಲು

ಕರಾವಳಿಯಲ್ಲಿ ಮಳೆ ಪ್ರಮಾಣ ಕೊಂಚ ಇಳಿಕೆ: ಬಿಸಿಲಿನ ಝಳಕ್ಕೆ ಜನ ಕಂಗಾಲು


ಕರಾವಳಿ ಕರ್ನಾಟಕದಾದ್ಯಂತ ಮಳೆ ಕೊಂಚ ಕಡಿಮೆಯಾಗುತ್ತಿದ್ದಂತೆ ಬಿಸಿಲಿನ ತಾಪ ಹೆಚ್ಚಾಗಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರು ಸೆಖೆಯಿಂದ ಹೈರಾಣಾಗಿದ್ದಾರೆ.


ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಆಗಾಗ್ಗೆ ಮಳೆಯಾಗುತ್ತಿತ್ತು. ಇದೀಗ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಹಲವು ಕಡೆ ಬಿಸಿಲು ಕಾಣಿಸಿಕೊಂಡಿದೆ. ಬೆಳಗ್ಗೆಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನದ ವೇಳೆಗೆ ಸೆಖೆಯ ವಾತಾವರಣ ಮತ್ತಷ್ಟು ಹೆಚ್ಚುತ್ತಿದೆ.

ಮಳೆ ಕಡಿಮೆಯಾದ ಬೆನ್ನಲ್ಲೇ ಉಷ್ಣಾಂಶ ಏರಿಕೆಯಾಗಿರುವುದು ಜನರ ದೈನಂದಿನ ಬದುಕಿನ ಮೇಲೂ ಪರಿಣಾಮ ಬೀರಿದೆ. ಮಧ್ಯಾಹ್ನದ ವೇಳೆಯಲ್ಲಿ ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು, ಹೊರಗೆ ಸಂಚರಿಸುವವರು ತೀವ್ರ ಸೆಖೆ ಅನುಭವಿಸುವಂತಾಗಿದೆ.

ಮಕ್ಕಳು, ವಯೋವೃದ್ಧರು ಹಾಗೂ ಬಿಸಿಲಿನಲ್ಲಿ ಕೆಲಸ ಮಾಡುವ ಕಾರ್ಮಿಕರು ಬಿಸಿಲಿನ ತಾಪದಿಂದ ತೊಂದರೆ ಅನುಭವಿಸುತ್ತಿದ್ದಾರೆ.  

ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಂಪೂರ್ಣವಾಗಿ ದೂರವಾಗಿಲ್ಲ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಮಳೆಯ ನಡುವೆಯೇ ಬಿಸಿಲಿನ ತಾಪವೂ ಹೆಚ್ಚಾಗಿರುವುದರಿಂದ ಕರಾವಳಿಯಲ್ಲಿ ಸದ್ಯ ಮಳೆ-ಬಿಸಿಲಿನ ಮಿಶ್ರ ವಾತಾವರಣ ಮುಂದುವರಿದಿದೆ.

Ads on article

Advertise in articles 1

advertising articles 2

Advertise under the article