-->
ಕುಂದಾಪುರದ ಮಾವಿನಮನೆ ಪರಿಸರದಲ್ಲಿ ನಾಯಿಗಳ ಸರಣಿ ಸಾವು: ವಿಷ ಹಾಕಿರುವ ಶಂಕೆ

ಕುಂದಾಪುರದ ಮಾವಿನಮನೆ ಪರಿಸರದಲ್ಲಿ ನಾಯಿಗಳ ಸರಣಿ ಸಾವು: ವಿಷ ಹಾಕಿರುವ ಶಂಕೆ


ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಮನೆ ಪರಿಸರದಲ್ಲಿ ನಾಯಿಗಳ ಸರಣಿ ಸಾವು ಸಂಭವಿಸಿದ್ದು, ಸ್ಥಳೀಯರಲ್ಲಿ ಹಾಗೂ ಪ್ರಾಣಿ ಪ್ರೇಮಿಗಳಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.


ಕಳೆದ ಎರಡು ತಿಂಗಳ ಅವಧಿಯಲ್ಲಿ ಎರಡು ನಾಯಿಗಳು ಮೃತಪಟ್ಟಿರುವ ಘಟನೆ ವರದಿಯಾಗಿದ್ದು, ಇದೀಗ ಮತ್ತೆ ಎರಡು ನಾಯಿಗಳು ಸಾವು ಬದುಕಿನ ನಡುವೆ ಹೋರಾಡುತ್ತಿವೆ. ನಾಯಿಗಳಿಗೆ ಕೋಳಿ ತ್ಯಾಜ್ಯದಲ್ಲಿ ವಿಷ ಹಾಕಿ ನೀಡಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಇದಕ್ಕೂ ಮೊದಲು ಇದೇ ಪರಿಸರದಲ್ಲಿ ಒಂದು ನಾಯಿಯನ್ನು ಕತ್ತಿಯಿಂದ ಕಡಿದು ಗಾಯಗೊಳಿಸಿದ ಘಟನೆ ನಡೆದಿತ್ತು ಎನ್ನಲಾಗಿದೆ. ಇದೀಗ ಮತ್ತೆ ನಾಯಿಗಳ ಸರಣಿ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ ಪ್ರಾಣಿ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯ ಅಸ್ವಸ್ಥಗೊಂಡಿರುವ ಎರಡು ನಾಯಿಗಳು ಸಾಯುವ ಸ್ಥಿತಿಯಲ್ಲಿ ಒದ್ದಾಡುತ್ತಿದ್ದು, ಅವುಗಳಿಗೆ ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಹೊಸಂಗಡಿ ಕೆಪಿಸಿ ಸೆಕ್ಯೂರಿಟಿ ಸಿಬ್ಬಂದಿ ಮಹೇಶ್ ಎಂಬಾತನ ವಿರುದ್ಧ ಸ್ಥಳೀಯರು ದೂರು ನೀಡಿದ್ದು, ಎರಡು ಕುಟುಂಬಗಳ ನಡುವಿನ ಆಂತರಿಕ ಜಗಳದ ಹಿನ್ನೆಲೆಯಲ್ಲಿ ನಾಯಿಗಳಿಗೆ ವಿಷ ನೀಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.  

Ads on article

Advertise in articles 1

advertising articles 2

Advertise under the article