-->
ಶ್ರೀಕಾಂತ್ ಶೆಟ್ಟಿಗೆ ಹಾನಗಲ್ ಗಣೇಶೋತ್ಸವಕ್ಕೆ ಪ್ರವೇಶ ನಿರ್ಬಂಧ: ಹಿಂದೂ ಸಂಘಟನೆಗಳ ಆಕ್ರೋಶ

ಶ್ರೀಕಾಂತ್ ಶೆಟ್ಟಿಗೆ ಹಾನಗಲ್ ಗಣೇಶೋತ್ಸವಕ್ಕೆ ಪ್ರವೇಶ ನಿರ್ಬಂಧ: ಹಿಂದೂ ಸಂಘಟನೆಗಳ ಆಕ್ರೋಶ


ಹಾನಗಲ್‌ನಲ್ಲಿ ನಡೆಯಲಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಪ್ರಮುಖ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಕಾರ್ಯಕ್ರಮಕ್ಕೆ ಒಂದು ದಿನ ಮುನ್ನ ನೋಟಿಸ್ ನೀಡಿ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ.


ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪೊಲೀಸರು ಇಂತಹ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪೊಲೀಸರು ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುವ ಬದಲು ರಾಜಕೀಯ ಒತ್ತಡಕ್ಕೆ ಮಣಿದು ಪಕ್ಷಪಾತದ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಂಘಟನೆಯ ಪ್ರಮುಖರು ಆರೋಪಿಸಿದ್ದಾರೆ.


ಶ್ರೀಕಾಂತ್ ಶೆಟ್ಟಿ ಅವರನ್ನು ಈ ಹಿಂದೆಯೂ ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿತ್ತು. ಇತ್ತೀಚೆಗೆ ಶರಣ್ ಪಂಪ್‌ವೆಲ್ ಸೇರಿದಂತೆ ಹಲವು ಹಿಂದೂ ಮುಖಂಡರು ಕೂಡ ಇಂತಹ ನಿರ್ಬಂಧಗಳನ್ನು ಎದುರಿಸಿದ್ದಾರೆ ಎಂದು ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ ವಿರುದ್ಧ ವಿವಿಧ ರೀತಿಯ ಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಮುಖಂಡರು, ಕಾರ್ಯಕ್ರಮದ ಮುನ್ನಾದಿನ ಕಾರ್ಯಕರ್ತರ ಮನೆಗಳಿಗೆ ಪೊಲೀಸರು ತೆರಳಿ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಿರುವುದು ಹಾಗೂ ಅವರೊಂದಿಗೆ ಛಾಯಾಚಿತ್ರ ತೆಗೆದುಕೊಂಡಿರುವುದು ಕುಟುಂಬಸ್ಥರ ಮನೋಬಲ ಕುಗ್ಗಿಸುವ ಪ್ರಯತ್ನವಾಗಿದೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಇಂತಹ ಘಟನೆಗಳು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಕ್ರಮಗಳ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯಬೇಕಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಮೇಲಿನ ನಿರ್ಬಂಧಗಳಿಗೆ ಸ್ಪಷ್ಟ ಕಾರಣ ನೀಡಬೇಕು ಮತ್ತು ಕಾನೂನು ಎಲ್ಲರಿಗೂ ಸಮಾನವಾಗಿ ಅನ್ವಯವಾಗಬೇಕು ಎಂದು ಹಿಂದೂ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article