-->
 ಉಡುಪಿ ಕೃಷ್ಣಮಠದ ರಥಬೀದಿಯಲ್ಲಿದ್ದ ಅನಧಿಕೃತ ಅಂಗಡಿಗಳ ತೆರವು

ಉಡುಪಿ ಕೃಷ್ಣಮಠದ ರಥಬೀದಿಯಲ್ಲಿದ್ದ ಅನಧಿಕೃತ ಅಂಗಡಿಗಳ ತೆರವು


ಶ್ರೀಕೃಷ್ಣಾಷ್ಟಮಿ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠದ ಸುತ್ತಮುತ್ತ ವ್ಯಾಪಾರಿಗಳು ಹಾಕಿದ್ದ ಅನಧಿಕೃತ ಅಂಗಡಿಗಳನ್ನು ನಗರಸಭೆ ಸಿಬ್ಬಂದಿಗಳು ಪೊಲೀಸರ ಸಹಕಾರದಿಂದ ತೆರವುಗೊಳಿಸಿದರು.


ಶ್ರೀಕೃಷ್ಣಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವದ ಹಿನ್ನೆಲೆಯಲ್ಲಿ ಕೃಷ್ಣ ಮಠದ ಸುತ್ತಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಿಗಳು ತಾತ್ಕಾಲಿಕ ಅಂಗಡಿಗಳನ್ನು ಹಾಕಿದ್ದರು. ವಿಶೇಷವಾಗಿ ರಥಬೀದಿ ಸುತ್ತಮುತ್ತ ಅನಧಿಕೃತವಾಗಿ ಹೂವಿನ ವ್ಯಾಪಾರ, ಬಟ್ಟೆ-ಬರೆ ಸೇರಿದಂತೆ ವಿವಿಧ ವಸ್ತುಗಳ ಅಂಗಡಿಗಳನ್ನು ಹಾಕಲಾಗಿತ್ತು. 



ವಿಟ್ಲಪಿಂಡಿ ಉತ್ಸವದ ಸಂದರ್ಭದಲ್ಲಿ ನಡೆಯುವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹಾಗೂ ಭಕ್ತರು ಸಂಚರಿಸಲು ಈ ಅಂಗಡಿಗಳಿಂದ ಅಡಚಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ನಗರಸಭೆ ಸಿಬ್ಬಂದಿ ಹಾಗೂ ಉಡುಪಿ ಪೊಲೀಸರು ಸ್ಥಳಕ್ಕೆ ತೆರಳಿ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವುದರ ಜತೆಗೆ, ವ್ಯಾಪಾರಿಗಳನ್ನು ಬೇರೆ ನಿಗದಿತ ಸ್ಥಳಗಳಿಗೆ ಸ್ಥಳಾಂತರಿಸಿದರು. ಉತ್ಸವದ ಸಂದರ್ಭದಲ್ಲಿ ರಥಬೀದಿ ಹಾಗೂ ಮಠದ ಸುತ್ತಮುತ್ತ ಸಂಚಾರ ಮತ್ತು ಭಕ್ತರ ಓಡಾಟಕ್ಕೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

Ads on article

Advertise in articles 1

advertising articles 2

Advertise under the article