-->
 ಮಂಗಳೂರು ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಲಿರುವ ಮಂಗಳೂರು ದಸರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುರುವಾರ ಶ್ರೀಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿ ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ರಾಧಾಕೃಷ್ಣ ಉರ್ವ, ಪಿ.ಕೆ.ಗೌರವಿ ರಾಜಶೇಖರ್, ಲತೀಶ್ ಸುವರ್ಣ, ಉದ್ಯಮಿ ಪ್ರವೀಣ್ ಕುಮಾರ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಕೋಶಾಧಿಕಾರಿ ಯೋಗೀಶ್ ಕೊಟ್ಯಾನ್, ಕದ್ರಿ ಶ್ರೀ ಮಂಜುನಾಥ ದೇವಳ ಟ್ರಸ್ಟಿ ರಾಜೇಂದ್ರ ಚಿಲಿಂಬಿ, ರವಿರಾಜ್, ಸುಭಾಷ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article