-->
 ಶಿರೂರಿನಲ್ಲಿ ಸರಣಿ ಅಪಘಾತ: ಬೈಕ್ ಸವಾರ ಸಾವು

ಶಿರೂರಿನಲ್ಲಿ ಸರಣಿ ಅಪಘಾತ: ಬೈಕ್ ಸವಾರ ಸಾವು



ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರಿನಲ್ಲಿ ಗುರುವಾರ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶಿರೂರಿನ ನಾಗೇಂದ್ರ ಮಹಾಲೆ (45) ಎಂದು ಗುರುತಿಸಲಾಗಿದೆ.

ಹೆದ್ದಾರಿಯಲ್ಲಿ ಸರಕು ತುಂಬಿದ ಲಾರಿಯನ್ನು ಮೇಲಕ್ಕೆತ್ತುವ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರಕ್ಕೆ ತಾತ್ಕಾಲಿಕವಾಗಿ ತಡೆ ಒಡ್ಡಲಾಗಿತ್ತು. ವಾಹನ ಸಂಚಾರ ನಿಯಂತ್ರಣಕ್ಕಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಈ ವೇಳೆ ಇಳಿಜಾರು ರಸ್ತೆಯಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ನಿಲ್ಲಿಸಲಾಗಿದ್ದ ಹೈವೆ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಬಳಿಕ ನಿಯಂತ್ರಣ ತಪ್ಪಿದ ಲಾರಿ ನಾಲ್ಕು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಓರ್ವ ಬೈಕ್ ಸವಾರ ನಾಗೇಂದ್ರ ಮಹಾಲೆ ಮೃತಪಟ್ಟಿದ್ದಾರೆ. ನಾಲ್ಕು ಬೈಕ್‌ಗಳು ಜಖಂಗೊಂಡಿವೆ. ರಬ್ಬರ್ ತುಂಬಿಕೊಂಡಿದ್ದ ಈ ಲಾರಿ ಕೇರಳದಿಂದ ಮಹಾರಾಷ್ಟ್ರದ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆ ಕುರಿತು ಬೈಂದೂರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Ads on article

Advertise in articles 1

advertising articles 2

Advertise under the article