ಭಜನೆ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವಕ ಸಾವು
Sunday, September 06, 2026
ಕೃಷ್ಣ ಜನ್ಮಾಷ್ಟಮಿ ಆಚರಣೆಯ ಅಂಗವಾಗಿ ತೊಕ್ಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ರಾತ್ರಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ತೊಕ್ಕೂರು ನಿವಾಸಿ, ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗಿಯಾಗಿದ್ದ ಶ್ರೀನಾಥ್ ಶೆಟ್ಟಿಗಾರ್ (38) ಮೃತರು. ಅಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವದಲ್ಲಿ ಭಾಗವಹಿಸಲು ಊರಿಗೆ ಬಂದಿದ್ದ ಅವರು, ಭಜನಾ ಕಾರ್ಯಕ್ರಮದ ವೇಳೆ ಏಕಾಏಕಿ ಕುಸಿದು ಬಿದ್ದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.