-->
 ತೆಂಕನಿಡಿಯೂರಿನಲ್ಲಿ ಜಿಲ್ಲಾ ಮಟ್ಟದ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿ

ತೆಂಕನಿಡಿಯೂರಿನಲ್ಲಿ ಜಿಲ್ಲಾ ಮಟ್ಟದ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿ


ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ನಿಟ್ಟಿನಲ್ಲಿ  ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಸಾಮಾಜಿಕ ಮುಖಂಡ ವಿಜಯ ಕೊಡವೂರು ಹೇಳಿದರು.


ತೆಂಕನಿಡಿಯೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗಿದ್ದು, ಶಿಸ್ತು, ತಂಡದ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.


 

Ads on article

Advertise in articles 1

advertising articles 2

Advertise under the article