-->
ಮಣಿಪಾಲ ಆಸ್ಪತ್ರೆಯ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ...!

ಮಣಿಪಾಲ ಆಸ್ಪತ್ರೆಯ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ...!


ಮಣಿಪಾಲದ ಕೆಎಂಸಿ ಆಸ್ಪತ್ರೆಯ ಕಟ್ಟಡದಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. 

ತೀರ್ಥಹಳ್ಳಿ ಮೂಲದ ರಾಜೇಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನಿಸಿದಾತ. ಈತನ ವಿರುದ್ಧ ಪತ್ನಿ ವರದಕ್ಷಿಣೆ ಕಿರುಕುಳ ಪ್ರಕರಣದ ದಾಖಲಿಸಿದ್ದರು. ಇದರಿಂದ ಬೇಸತ್ತ ರಾಜೇಶ್ ಶೆಟ್ಟಿ, ವಿಷ ಕುಡಿದು ಆತ್ಮಹತ್ಯೆ ಯತ್ನಿಸಿದ್ದ. ಆತನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಎಮರ್ಜೆನ್ಸಿ ವಾರ್ಡ್ ನ ಸಮೀಪದಿಂದ ಕಟ್ಟಡದಿಂದ ಜಿಗಿದಿದ್ದಾನೆ. ಘಟನೆಯಲ್ಲಿ ಆತನ ಕಾಲುಮುರಿತಕ್ಕೊಳಗಾಗಿದೆ. ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.

https://www.instagram.com/reel/Dd6WEj1ySqH/?stkn=dzBlOGxmcTllZWVy

Ads on article

Advertise in articles 1

advertising articles 2

Advertise under the article