-->
 ಹಿಂದೂ ಧರ್ಮದ ಚಟುವಟಿಕೆಗಳಿಗೆ ಅಡ್ಡಿಪಡಿಸಿದರೆ ಸರ್ಕಾರವೇ ಭಸ್ಮ: ಶಾಸಕ ಸುನಿಲ್ ಕುಮಾರ್

ಹಿಂದೂ ಧರ್ಮದ ಚಟುವಟಿಕೆಗಳಿಗೆ ಅಡ್ಡಿಪಡಿಸಿದರೆ ಸರ್ಕಾರವೇ ಭಸ್ಮ: ಶಾಸಕ ಸುನಿಲ್ ಕುಮಾರ್


ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆಯನ್ನು ತೋರಿಸುತ್ತದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಓಲೈಕೆಗಾಗಿ ಹಿಂದುತ್ವ, ಸನಾತನ ಧರ್ಮ ಹಾಗೂ ಹಿಂದೂಗಳ ಧಾರ್ಮಿಕ ಚಟುವಟಿಕೆಗಳನ್ನು ಅವಹೇಳನ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಸನಾತನ ಧರ್ಮಕ್ಕೆ ಅಪಮಾನ ಮಾಡುವ ಯಾವುದೇ ಹೇಳಿಕೆಗಳನ್ನು ಸಮಾಜ ಸಹಿಸುವುದಿಲ್ಲ ಎಂದು ಹೇಳಿದರು.

“ಬಸವರಾಜ ರಾಯರೆಡ್ಡಿಯವರೇ, ನೀವು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಅದರ ನೆಪದಲ್ಲಿ ಹಿಂದೂ ಧರ್ಮ ಹಾಗೂ ಹಿಂದೂಗಳ ಧಾರ್ಮಿಕ ಚಟುವಟಿಕೆಗಳಿಗೆ ಅಪಮಾನ ಮಾಡಬಾರದು” ಎಂದು ಸುನಿಲ್ ಕುಮಾರ್ ಹೇಳಿದರು.

ಗಣೇಶೋತ್ಸವ, ನವರಾತ್ರಿ ಸೇರಿದಂತೆ ಯಾವುದೇ ಧಾರ್ಮಿಕ ಉತ್ಸವಗಳಿಗೆ ವಿನಾಕಾರಣ ತೊಂದರೆ ನೀಡಬಾರದು. ಧಾರ್ಮಿಕ ಚಟುವಟಿಕೆಗಳಿಗೆ ಅಡೆತಡೆ ಮಾಡುವ ಮೊದಲು ಸರ್ಕಾರ ನೂರು ಬಾರಿ ಯೋಚಿಸಬೇಕು ಎಂದು ಅವರು ಎಚ್ಚರಿಸಿದರು.

“ಧಾರ್ಮಿಕ ಚಟುವಟಿಕೆಗಳಿಗೆ ತೊಂದರೆ ನೀಡಿದರೆ ನಿಮ್ಮ ಅವನತಿ ಗಣೇಶೋತ್ಸವದ ಮೂಲಕವೇ ಆಗಲಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕ್ರಮವನ್ನು ಸಹಿಸುವುದಿಲ್ಲ,” ಎಂದು ಅವರು ಹೇಳಿದರು.

ಮುಸ್ಲಿಂ ಓಲೈಕೆಯ ನೆಪದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳು ಹಾಗೂ ಧಾರ್ಮಿಕ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಪ್ರಯತ್ನಗಳು ನಡೆಯಬಾರದು. ಇಲ್ಲವಾದರೆ ಸರ್ಕಾರವೇ ಭಸ್ಮವಾಗಲಿದೆ ಎಂದು ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.

Ads on article

Advertise in articles 1

advertising articles 2

Advertise under the article