-->
ಕಡಿಯಾಳಿ ಗಣೇಶೋತ್ಸವ ವಜ್ರಮಹೋತ್ಸವದ ಯಶಸ್ಸು ಉಡುಪಿ ಜನತೆಗೆ ಸಮರ್ಪಣೆ: ಡಾ. ಕಟ್ಟೆ ರವಿರಾಜ ಆಚಾರ್ಯ

ಕಡಿಯಾಳಿ ಗಣೇಶೋತ್ಸವ ವಜ್ರಮಹೋತ್ಸವದ ಯಶಸ್ಸು ಉಡುಪಿ ಜನತೆಗೆ ಸಮರ್ಪಣೆ: ಡಾ. ಕಟ್ಟೆ ರವಿರಾಜ ಆಚಾರ್ಯ


ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಕಡಿಯಾಳಿ ಇದರ 60ನೇ ವರ್ಷದ ಸಮಾಪನ ಸಭೆಯು ಉಡುಪಿ ಶಾರದಾ ಕಲ್ಯಾಣ ಮಂಟಪದಲ್ಲಿ ಜರುಗಿತು. 

ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಜ್ರಮಹೋತ್ಸವ ಸಮಿತಿಯ ಅಧ್ಯಕ್ಷರಾದ ಡಾ.ಕಟ್ಟೆ ರವಿರಾಜ ಆಚಾರ್ಯ ಅವರು, ವಜ್ರಮಹೋತ್ಸವವು ಉಡುಪಿ ಮಹಾಜನತೆಯ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದಿದ್ದು ಇದರ ಶ್ರೇಯಸ್ಸು ಉಡುಪಿಯ ಜನತೆಗೆ ಸಲ್ಲುತ್ತದೆ ಎಂದು ಹೇಳಿದರು. 

ವಜ್ರಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಮತ್ತು ಉಡುಪಿಯ ಶಾಸಕ ಯಶಪಾಲ ಎ. ಸುವರ್ಣ ಮಾತನಾಡಿ, ಕಾರ್ಯಕರ್ತರ ಹುಮ್ಮಸ್ಸು ಮತ್ತು ಹಿರಿಯರ ಮಾರ್ಗದರ್ಶನದಿಂದ ಕಡಿಯಾಳಿ ಗಣೇಶೋತ್ಸವವು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮೆರವಣಿಗೆಗೆ ಶೋಭೆ ನೀಡಿದ ಶಾರದೆ ವೇಷಧಾರಿ ಸಾನ್ವಿ ಅವರನ್ನು ಗೌರವಿಸಲಾಯಿತು.


ವಜ್ರಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಎಂ ಅಂಚನ್ ಕಾರ್ಯಕ್ರಮಗಳ ಅವಲೋಕನ ಮಾಡಿದರು. ಸಮಿತಿಯ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ ಸ್ವಾಗತಿಸಿ, ಕೋಶಾಧಿಕಾರಿ ಎಂ ವಲ್ಲಭ ಭಟ್ ವಂದಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ ಮತ್ತು ಅಧ್ಯಕ್ಷರಾದ ಪ ವಸಂತ್ ಭಟ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article