ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹಾಡುಹಗಲೇ ಕಾಡುಕೋಣಗಳು ಪ್ರತ್ಯಕ್ಷ
Friday, September 11, 2026
ಪುತ್ತೂರು ನಗರದ ಬೈಪಾಸ್ ರಸ್ತೆಯ ದುಗ್ಗಮ್ಮ–ದೇರಣ್ಣ ಹಾಲ್ ಸಮೀಪ ಇಂದು ನಸುಕಿನ ಜಾವ ಕಾಡುಕೋಣಗಳು ಪ್ರತ್ಯಕ್ಷಗೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.
ಮುಂಜಾನೆ ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚರಿಸುತ್ತಿದ್ದ ವೇಳೆ ರಸ್ತೆಯಲ್ಲೇ ಕಾಡುಕೋಣಗಳು ಕಾಣಿಸಿಕೊಂಡಿದ್ದು, ಹಾಲು ಹಾಗೂ ಪತ್ರಿಕೆ ವಿತರಕರು ಕೆಲಕಾಲ ಬೆಚ್ಚಿಬಿದ್ದರು. ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಸಮೀಪದ ಅರಣ್ಯ ಪ್ರದೇಶಗಳಿಂದ ಕಾಡುಕೋಣಗಳು ನಗರ ಪ್ರದೇಶಕ್ಕೆ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ನಗರ ಪ್ರದೇಶಕ್ಕೂ ಕಾಡುಕೋಣಗಳು ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ತಕ್ಷಣ ಕಾರ್ಯಾಚರಣೆ ನಡೆಸಿ ಅವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಡಬೇಕು ಹಾಗೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.