ಪ್ರಧಾನಿ ಜನ್ಮದಿನ ಅಂಗವಾಗಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ವಿದ್ಯಾರ್ಥಿಗಳಿಗೆ ಚೆಸ್ ಸ್ಪರ್ಧೆ
Tuesday, September 08, 2026
ಕಾರ್ಕಳ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಕಾರ್ಕಳದ ಬಂಡಿಮಠ ಮೂಡು ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ ಚೆಸ್ ಸ್ಪರ್ಧೆಯನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜಾ, ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಪ್ರಭಾರಿ ಜೆಸೆಲ್ ಡಿಸೋಜಾ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಮಾಜಿ ಬಿಜೆಪಿ ಕಾರ್ಕಳ ಅಧ್ಯಕ್ಷ ಮಹಾವೀರ ಹೆಗ್ಡೆ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶೇಕ್ ಅಸೀಫ್ ಮತ್ತು ಮೊಹಮ್ಮದ್ ಅಫ್ಜರ್, ಕಾರ್ಕಳ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಪ್ರಕಾಶ್ ಡಿಸೋಜಾ ಸೇರಿದಂತೆ ಅಂತೋಣಿ ಡಿಸೋಜಾ, ಸಲೀಂ ಅಂಬಾಗಿಲು, ಜೆರಾಲ್ಡ್ ಡಿಸೋಜಾ, ಚಿರಂಜೀವಿ ಜೈನ್, ಇಜಾಜ್ ಶರೀಫ್, ಜ್ಯೋತಿ ಹರೀಶ್, ರೀನಾ ಜ್ಯೋತಿ ಡಿಸೋಜಾ, ಬೇಸಿಲ್ ಡಿಸೋಜಾ, ಶ್ಯಾಮಲಾ ಕುಂದರ್ ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಚೆಸ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಲ್ಲಿನ ಬೌದ್ಧಿಕ ಸಾಮರ್ಥ್ಯ ಮತ್ತು ಕ್ರೀಡಾಸಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
