-->
 ಕಟಪಾಡಿಯಲ್ಲಿ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ

ಕಟಪಾಡಿಯಲ್ಲಿ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ


ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಕಲ್ಲಾಪು ಡೀವಿಯೇಷನ್‌ ಬಳಿ ಮಂಗಳವಾರ  ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರೊಂದು ಕಲ್ಲಾಪು ಡೀವಿಯೇಷನ್‌ ಬಳಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ ಪರಿಣಾಮ, ಅದರ ಹಿಂದಿನಿಂದ ಬರುತ್ತಿದ್ದ ಕಾರುಗಳು ನಿಯಂತ್ರಣ ತಪ್ಪಿ ಪರಸ್ಪರ ಢಿಕ್ಕಿ ಹೊಡೆದಿವೆ ಎನ್ನಲಾಗಿದೆ.

ಅಪಘಾತದಲ್ಲಿ ನಾಲ್ಕೂ ಕಾರುಗಳು ಜಖಂಗೊಂಡಿದ್ದು, ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ವಾಹನಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.

Ads on article

Advertise in articles 1

advertising articles 2

Advertise under the article