-->
 ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸ್ವಚ್ಚತಾಕಾರ್ಯ

ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸ್ವಚ್ಚತಾಕಾರ್ಯ


ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ವತಿಯಿಂದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ 99ನೇ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಲಾಯಿತು.


ಜಿಲ್ಲಾ ಮುಖ್ಯ ಆಯುಕ್ತರಾದ ಇಂದ್ರಾಳಿ ಜಯಕರ್ ಶೆಟ್ಟಿ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಬೆಳಿಗ್ಗೆ 7 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯ 21 ಕಾಲೇಜುಗಳ ಸುಮಾರು 200ಕ್ಕೂ ಅಧಿಕ ರೋವರ್–ರೇಂಜರ್ಸ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.


ಕಾರ್ಯಕ್ರಮದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ರೈಲ್ವೆ ಅಧಿಕಾರಿ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಆನಂದ್ ಬಿ. ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಆರ್‌ಎಸ್‌ಎಲ್ ಅರವಿಂದ್, ಆರ್‌ಎಲ್ ಸ್ಮಿತಾ ಫೆರ್ನಾಂಡಿಸ್, ಆರ್‌ಎಲ್ ವಂದನಾ ಸೇರಿದಂತೆ ರೈಲ್ವೆ ಸಿಬ್ಬಂದಿ ಹಾಗೂ ರೈಲ್ವೆ ರಕ್ಷಣಾ ಠಾಣೆಯ ಎಎಸ್‌ಐ ಮತ್ತು ಇತರ ಅಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಅವರು ಕಾರ್ಯಕ್ರಮವನ್ನು ಸಂಘಟಿಸಿದ್ದರು. ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸರ್ವಧರ್ಮ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. 

Ads on article

Advertise in articles 1

advertising articles 2

Advertise under the article