-->
ಬ್ಯಾಂಕರ್ ಕೊಡಂಕೂರು ಜಯರಾಮ ಶೆಟ್ಟಿ ನಿಧನ

ಬ್ಯಾಂಕರ್ ಕೊಡಂಕೂರು ಜಯರಾಮ ಶೆಟ್ಟಿ ನಿಧನ


ಇಂದ್ರಾಳಿ ನಿವಾಸಿ ಕೊಡಂಕೂರು ಜಯರಾಮ ಶೆಟ್ಟಿ (74) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು. 

ಅವರು ವಿಜಯಾ ಬ್ಯಾಂಕಿನ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಬಳಿಕ ಉಡುಪಿಯಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಉಡುಪಿಯ ನಿತ್ಯಾನಂದ ಕ್ರೆಡಿಟ್ ಕೋ-ಒಪರೇಟಿವ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಪ್ರಸ್ತುತ ನಿರ್ದೇಶಕರಾಗಿದ್ದರು. ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ,  ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗವನ್ನಗಲಿದ್ದಾರೆ. 

Ads on article

Advertise in articles 1

advertising articles 2

Advertise under the article