-->
ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ,ಯಲ್ಲಿ  ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ,ಯಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ


ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯ ಅಂಗವಾಗಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇವರ ಆಶ್ರಯದಲ್ಲಿ, ಕಾರ್ಕಳದ ಡಾ. ಎ. ವಿ. ಬಾಳಿಗಾ ಸಮುದಾಯ ಆಪ್ತ ಸಮಾಲೋಚನಾ ಮತ್ತು ಮಕ್ಕಳ ಮಾರ್ಗದರ್ಶನ ಕೇಂದ್ರದಲ್ಲಿ ಮಾಹಿತಿ ಕಾರ್ಯಾಗಾರ ನಡೆಯಿತು.

ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂದೀಪ್ ಕುಡ್ವ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಆತ್ಮಹತ್ಯೆ ತಡೆಗಟ್ಟುವಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದಾಗಿದೆ. ಮಾನಸಿಕ ಒತ್ತಡ ಅಥವಾ ಸಂಕಷ್ಟದಲ್ಲಿರುವ ವ್ಯಕ್ತಿಯೊಂದಿಗೆ ಮುಕ್ತವಾಗಿ ಮಾತನಾಡುವುದು, ಅವರ ಮಾತುಗಳನ್ನು ಆಲಿಸುವುದು ಹಾಗೂ ಅಗತ್ಯವಿದ್ದಾಗ ಸೂಕ್ತ ಮಾನಸಿಕ ಆರೋಗ್ಯ ಸೇವೆಗಳಿಗೆ ಸಂಪರ್ಕ ಕಲ್ಪಿಸುವುದು ಅತ್ಯಂತ ಮುಖ್ಯ. ಆತ್ಮಹತ್ಯೆಯ ಕುರಿತು ಸಮಾಜದಲ್ಲಿರುವ ತಪ್ಪು ನಂಬಿಕೆಗಳನ್ನು ದೂರ ಮಾಡಿ, ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಅವರು ವಹಿಸಿದ್ದರು. ಆಸ್ಪತ್ರೆಯ ಸಿಬ್ಬಂದಿ ದಿವ್ಯಾ ಪ್ರಾರ್ಥನೆಯನ್ನು ನೆರವೇರಿಸಿದರು. ವೃಂದ ಸ್ವಾಗತಿಸಿದರು. ವಿಜಯ್ ಅತಿಥಿಗಳನ್ನು ಪರಿಚಯಿಸಿದರು.

ಸಭಾ ಕಾರ್ಯಕ್ರಮದ ನಂತರ, “ಆತ್ಮಹತ್ಯೆಯ ಕುರಿತು ಇರುವ ತಪ್ಪು ನಂಬಿಕೆಗಳು” ಎಂಬ ವಿಷಯದ ಕುರಿತು ಆಪ್ತ ಸಮಾಲೋಚಕರಾದ ದೀಪಶ್ರೀ ಹಾಗೂ “ಆತ್ಮಹತ್ಯೆಯ ಲಕ್ಷಣಗಳು ಮತ್ತು ಅದನ್ನು ತಡೆಗಟ್ಟುವ ಮಾರ್ಗಗಳು” ಎಂಬ ವಿಷಯದ ಕುರಿತು ಮನೋಸಾಮಾಜಿಕ ತಜ್ಞೆ ವಿದ್ಯಾಶ್ರೀ ಮಾಹಿತಿ ನೀಡಿದರು. ವಿದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಫಾರ್ಮಸಿಸ್ಟ್ ರವಿ ಕೆದ್ಲಾ ಅವರು ವಂದಿಸಿದರು. ಸರ್ಕಾರಿ ನರ್ಸಿಂಗ್ ಕಾಲೇಜು, ಕಾರ್ಕಳ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಚಿಕಿತ್ಸೆಗೆ ಆಗಮಿಸಿದ ಮಾನಸಿಕ ಆರೋಗ್ಯ ಕೇಂದ್ರದ ಗ್ರಾಹಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.

Ads on article

Advertise in articles 1

advertising articles 2

Advertise under the article