-->
 ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಕೋಟೇಶ್ವರದಲ್ಲಿ ಚೆಸ್ ಪಂದ್ಯಕೂಟ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಕೋಟೇಶ್ವರದಲ್ಲಿ ಚೆಸ್ ಪಂದ್ಯಕೂಟ


ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆಯ 25 ವರ್ಷಗಳನ್ನು ಸ್ಮರಿಸುವ ಸಲುವಾಗಿ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಚೆಸ್ ಪಂದ್ಯಕೂಟ ನಡೆಯಿತು.


ಪಂದ್ಯಕೂಟದ ಸಮಾರೋಪ ಸಮಾರಂಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸೇವಾ ಪಯಣ ದೇಶಕ್ಕೆ ಸ್ಫೂರ್ತಿಯಾಗಿದೆ. ‘ಸೇವಾ ಸಂಕಲ್ಪ’ದ ಮೂಲಕ ಯುವಜನರಲ್ಲಿ ಬೌದ್ಧಿಕ ಹಾಗೂ ಕ್ರೀಡಾ ಚೈತನ್ಯ ಬೆಳೆಸುವ ಕಾರ್ಯವನ್ನು ಅಲ್ಪಸಂಖ್ಯಾತ ಮೋರ್ಚಾ ಮಾಡಿದೆ. ಚೆಸ್‌ನಂತಹ ಕ್ರೀಡೆಗಳು ಯುವಕರಲ್ಲಿ ಶಿಸ್ತು, ತಾಳ್ಮೆ ಹಾಗೂ ಏಕಾಗ್ರತೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸೇವಾ ಸಂಕಲ್ಪ ಅಭಿಯಾನದಡಿ ಜಿಲ್ಲೆಯಾದ್ಯಂತ ಸೇವಾ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಅಲ್ಪಸಂಖ್ಯಾತ ಸಮುದಾಯದ ಯುವಕರನ್ನು ಮುಖ್ಯವಾಹಿನಿಗೆ ತರುವಲ್ಲಿ ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಲಿವೆ ಎಂದರು.

ಸಮಾರಂಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ರುಡಾಲ್ಫ್, ಪ್ರಧಾನ ಕಾರ್ಯದರ್ಶಿ ಶೇಖ್ ಆಶಿಫ್, ಮಂಡಲ ಅಧ್ಯಕ್ಷ ಸಾಜನ್ ಪಿ. ಜೇಮ್ಸ್, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಹೆರ್ಗ ದಿನಕರ ಶೆಟ್ಟಿ, ಶ್ರೀಕಾಂತ ನಾಯಕ, ಪ್ರಮುಖರಾದ ಶಿಲ್ಪಾ ಜಿ. ಸುವರ್ಣ ಹಾಗೂ ಅನಿತಾ ಆರ್. ಬೈಂದೂರು ಉಪಸ್ಥಿತರಿದ್ದರು.

ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಸ್ವಾಗತಿಸಿದರು. ನವೀನ್ ಡಿಸೋಜ ನಿರೂಪಿಸಿದರು. ಗ್ಲೆನ್ ಮೋನಿಸ್ ವಂದಿಸಿದರು. ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article