-->
 ಪುತ್ತೂರು ಗಲಾಟೆ ಪ್ರಕರಣ: ಸುದರ್ಶನ್ ಪೈಗೆ ಜಾಮೀನು, ಅಂಜನಾ ಪೈಗೆ ನಿರೀಕ್ಷಣಾ ಜಾಮೀನು

ಪುತ್ತೂರು ಗಲಾಟೆ ಪ್ರಕರಣ: ಸುದರ್ಶನ್ ಪೈಗೆ ಜಾಮೀನು, ಅಂಜನಾ ಪೈಗೆ ನಿರೀಕ್ಷಣಾ ಜಾಮೀನು


ಪುತ್ತೂರು ತಾಲೂಕಿನ ದರ್ಬೆಯ ಡಿಜಿಟಲ್ ಜನಸೇವಾ ಕೇಂದ್ರದಲ್ಲಿ ದಾಖಲೆ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿ, ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

ಸುಳ್ಯ ತಾಲೂಕಿನ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ವಾನ್ ನೀಡಿದ ದೂರಿನ ಆಧಾರದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಸ್ಟ್ 21ರಂದು ದಾಖಲೆಗಳ ಪ್ರಿಂಟ್ ಹಾಗೂ ಲ್ಯಾಮಿನೇಷನ್‌ಗಾಗಿ ಜನಸೇವಾ ಕೇಂದ್ರಕ್ಕೆ ತೆರಳಿದ್ದ ವೇಳೆ, ಒಂದು ದಾಖಲೆ ಹಾನಿಗೊಂಡಿರುವುದು ಕಂಡುಬಂದಿತ್ತು. ಇದನ್ನು ಸರಿಪಡಿಸುವಂತೆ ಅಥವಾ ಹೊಸ ದಾಖಲೆ ಪಡೆಯಲು ತಗಲುವ ವೆಚ್ಚ ನೀಡುವಂತೆ ಕೇಳಿದಾಗ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸುದರ್ಶನ್ ಪೈ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

Ads on article

Advertise in articles 1

advertising articles 2

Advertise under the article