ಕದ್ರಿ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಸಿಎಂ ಡಿಕೆಶಿ ವಿಶೇಷ ಪೂಜೆ
Friday, September 18, 2026
ಮಂಗಳೂರು ನಗರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಕದ್ರಿಯ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕದ್ರಿ ಸರ್ಕ್ಯೂಟ್ ಹೌಸ್‌ನಿಂದ ಸಮೀಪದಲ್ಲಿರುವ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಬಳಿಕ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಅವರ ಹೆಸರಿನಲ್ಲಿ ಏಕದಶ ರುದ್ರಾಭಿಷೇಕ ಸೇರಿದಂತೆ ವಿವಿಧ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ದೇವಸ್ಥಾನದ ಅರ್ಚಕರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಮುಖ್ಯಮಂತ್ರಿಗಳಿಗೆ ಪ್ರಸಾದ ನೀಡಿದರು.
.jpeg)
