-->
 ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಇನ್ಸ್‌ಪೆಕ್ಟರ್

ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಇನ್ಸ್‌ಪೆಕ್ಟರ್


ವಂಚನೆ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು 25,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಅದರ ಮೊದಲ ಕಂತಾಗಿ 5,000 ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲಂಚದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article