-->
 ಮಂಗಳೂರು ನಗರದ ನೂತನ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ

ಮಂಗಳೂರು ನಗರದ ನೂತನ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ


ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಐಪಿಎಸ್ ಅಧಿಕಾರಿ ಸ್ಯಾಮ್ ವರ್ಗಿಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

2022ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಸ್ಯಾಮ್ ವರ್ಗಿಸ್ ಅವರು ಪ್ರಸ್ತುತ ಬೆಂಗಳೂರಿನ ಅಪರಾಧ ತನಿಖಾ ವಿಭಾಗದಲ್ಲಿ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದೀಗ ಅವರನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಮಹತ್ವದ ಹೊಣೆಗಾರಿಕೆಯನ್ನು ವಹಿಸಿಕೊಳ್ಳಲಿದ್ದಾರೆ.

Ads on article

Advertise in articles 1

advertising articles 2

Advertise under the article