-->
 ಹೂಡೆಯ ರಸ್ತೆ ಬದಿ ಪತ್ತೆಯಾದ ನವಜಾತ ಶಿಶು ಆಸ್ಪತ್ರೆಯಲ್ಲಿ ಮೃತ್ಯು

ಹೂಡೆಯ ರಸ್ತೆ ಬದಿ ಪತ್ತೆಯಾದ ನವಜಾತ ಶಿಶು ಆಸ್ಪತ್ರೆಯಲ್ಲಿ ಮೃತ್ಯು


ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ಪತ್ತೆಯಾದ ನವಜಾತ ಶಿಶು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. 

ಇಂದು ಬೆಳಿಗ್ಗೆ ಸ್ಥಳೀಯರು ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಗಂಡು ಮಗು ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಮಗುವಿನಲ್ಲಿ ಹೃದಯ ಬಡಿತ ಇರುವುದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ರಸ್ತೆ ಬದಿ ಎಸೆದು ಹೋದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. 


 

Ads on article

Advertise in articles 1

advertising articles 2

Advertise under the article