-->
 ಕೋಟದಲ್ಲಿ ಶಾಲಾ ಶಿಕ್ಷಕರ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಸಮಾರೋಪ

ಕೋಟದಲ್ಲಿ ಶಾಲಾ ಶಿಕ್ಷಕರ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಸಮಾರೋಪ


ಕೋಟದ ವಿ-ಶೈನ್ ಕೋಚಿಂಗ್ ಸೆಂಟರ್ ವತಿಯಿಂದ ಪ್ರಾಥಮಿಕ, ಪ್ರೌಢಶಾಲೆ, ದೈಹಿಕ ಶಿಕ್ಷಣ ಹಾಗೂ ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಶಾಲಾ ಶಿಕ್ಷಕರ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯಿತು.

ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು. ಕಾರ್ಯಾಗಾರದಲ್ಲಿ 100ಕ್ಕೂ ಅಧಿಕ ಶಿಕ್ಷಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಲಿಖಿತ ಪರೀಕ್ಷೆ ಆಯೋಜಿಸಲಾಗಿದ್ದು, ಮಂಗಳೂರಿನ ಗುರುಪುರದ ನೇಹಾ ಅವರು ಅತ್ಯಧಿಕ ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದರು. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಟ್ರಸ್ಟ್, ಕೋಟದ ಪ್ರವರ್ತಕ ಆನಂದ್ ಸಿ. ಕುಂದರ್, ಗಣೇಶ್ ಕ್ಯಾಶ್ಯೂ ಸಮೂಹ ಸಂಸ್ಥೆಯ ಪ್ರತಿನಿಧಿ ಗಣೇಶ್ ಕಿಣಿ, ಬೆಳ್ವೆಯ ಗಣೇಶ್, ಡಯಟ್ ಉಡುಪಿ ಪ್ರಾಂಶುಪಾಲ ಅಶೋಕ್ ಕಾಮತ್ ಹಾಗೂ ಬ್ರಹ್ಮಾವರ ತಾಲೂಕು ಪಂಚಾಯಿತಿ ಯೋಜನಾ ನಿರ್ದೇಶಕ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು. ವಿ-ಶೈನ್ ಕೋಚಿಂಗ್ ಸೆಂಟರ್ ನಿರ್ದೇಶಕ ಹರೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿವೇಕ್ ಅಮೀನ್ ಸ್ವಾಗತಿಸಿದರು. ಗಿರೀಶ್ ಕುಮಾರ್ ಶೆಟ್ಟಿ ವಂದಿಸಿದರು.

Ads on article

Advertise in articles 1

advertising articles 2

Advertise under the article